Oyorooms IN

Wednesday, 24th May, 2017 1:21 AM

BREAKING NEWS

ಕೊಪ್ಪಳ

ದೇಶದಲ್ಲಿಯೇ ಮೊದಲ ಬಾರಿಗೆ ‘ಕೃಷಿಭಾಗ್ಯ’ ಯೋಜನೆ ಜಾರಿಗೊಳಿಸಿದ್ದು ನಮ್ಮದು : ಕೃಷ್ಣಭೈರೇಗೌಡ

kopalla

ಕೊಪ್ಪಳ: ರಾಜ್ಯದ ಒಣ ಬೇಸಾಯ ಅವಲಂಬಿತ ರೈತರಿಗಾಗಿ ನಮ್ಮ ಸರ್ಕಾರ ಜಾರಿಗೊಳಿಸಿರುವ ಕೃಷಿ ಭಾಗ್ಯ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದ್ದು, ನೆರೆ ಹೊರೆಯ ರಾಜ್ಯದವರೂ ಈ ಯೋಜನೆ ಅಳವಡಿಕೆಗೆ ಉತ್ಸುಕರಾಗಿದ್ದಾರೆ ಎಂದು ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

ಇದೇ ಆಗಸ್ಟ್ 29 ರಂದು ಕೊಪ್ಪಳದಲ್ಲಿ ಕೃಷಿ ಭಾಗ್ಯ ಯೋಜನೆಯ ಉತ್ತರ ಕರ್ನಾಟಕದ 12 ಜಿಲ್ಲೆಗಳ ರೈತ ಫಲಾನುಭವಿ ಸಮಾವೇಶ ನಡೆಯುವ ಸ್ಥಳದ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದ ಒಣ ಬೇಸಾಯ ಅವಲಂಬಿತ ರೈತರು, ಮಳೆ ಕೊರತೆಯಾಗಿ ಸಂಕಷ್ಟ ಅನುಭವಿಸುವ ರೈತರ ನೆರವಿಗೆ ಬರಬೇಕೆಂಬ ಉದ್ದೇಶದಿಂದ ಸರ್ಕಾರ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಮಳೆಯ ನೀರು ವ್ಯರ್ಥವಾಗಿ ಹರಿದು ಹೋಗದಂತೆ ಕೃಷಿ ಹೊಂಡಗಳ ಮೂಲಕ ಸಂಗ್ರಹಿಸಿ, ಮಳೆಯ ಕೊರತೆ ಸಂದರ್ಭದಲ್ಲಿ ಈ ನೀರು ಉಪಯೋಗಿಸಿಕೊಂಡು, ರೈತರು ಆರ್ಥಿಕವಾಗಿ ಸಬಲರಾಗಬಹುದಾಗಿದೆ. ನಂತರ ಪಾಲಿ ಹೌಸ್ ಅಳವಡಿಸಿಕೊಂಡು, ಕಡಿಮೆ ನೀರು ಬಳಸಿ, ಶೇ. 30 ರಿಂದ 40 ರಷ್ಟು ಹೆಚ್ಚು ಇಳುವರಿ ಪಡೆಯಬಹುದಾಗಿದೆ. ಈಗಾಗಲೆ ಕೃಷಿ ಭಾಗ್ಯ ಯೋಜನೆ ಜಾರಿಯಾಗಿ ಸುಮಾರು ಎರಡು ವರ್ಷಗಳಾಗಿದ್ದು, ರಾಜ್ಯದ ಅಂದಾಜು 01 ಲಕ್ಷ ರೈತ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆದುಕೊಂಡಿದ್ದಾರೆ. ಅದರಲ್ಲೂ ಹೆಚ್ಚಾಗಿ ಉತ್ತರ ಕರ್ನಾಟಕ ರಾಜ್ಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ರೈತರು ಬಹುವಾಗಿ ಮೆಚ್ಚಿಕೊಂಡಿದ್ದಾರೆ.
ದೇಶದಲ್ಲಿಯೇ ಇಂತಹ ಯೋಜನೆಯನ್ನು ಮೊದಲ ಬಾರಿಗೆ ಜಾರಿಗೊಳಿಸಿರುವ ಕೀರ್ತಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ. ಇಡೀ ದೇಶಕ್ಕೆ ಈ ಯೋಜನೆ ಮಾದರಿಯಾಗಿದ್ದು, ಈಗಾಗಲೆ ಈ ಯೋಜನೆಯನ್ನು ನೆರೆಯ ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳು ಅಳವಡಿಸಿಕೊಳ್ಳಲು ಉತ್ಸುಕವಾಗಿವೆ. ಕೇಂದ್ರ ಸರ್ಕಾರವೂ ಕೂಡ ಈ ಯೋಜನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದು, ಯೋಜನೆಯ ರೂಪುರೇಷೆಗಳನ್ನು ರಾಜ್ಯ ಸರ್ಕಾರದಿಂದ ಪಡೆದಿದೆ. ಕೃಷಿ ಭಾಗ್ಯ ಯೋಜನೆಯನ್ನು ರೈತರಿಗಾಗಿ ಸಮರ್ಪಣೆಗೊಳಿಸಲು, ಈ ಯೋಜನೆಯ ಸೌಲಭ್ಯ ಪಡೆದು, ಲಾಭ ಕಂಡುಕೊಂಡಿರುವ ರೈತರು, ಇನ್ನಷ್ಟು ರೈತರಿಗೆ ಪ್ರೇರೇಪಣೆ ನೀಡಲಿ, ಪ್ರಗತಿಪರ ರೈತರು ತಮ್ಮ ತಮ್ಮ ನಡುವೆ ವಿಚಾರ ವಿನಿಮಯ ಮಾಡಿಕೊಂಡು, ಕೃಷಿ ಕ್ಷೇತ್ರವನ್ನು ಇನ್ನಷ್ಟು ಸಬಲಗೊಳಿಸಲಿ ಎನ್ನುವ ಉದ್ದೇಶಕ್ಕಾಗಿಯೇ ಉತ್ತರ ಕರ್ನಾಟಕದ ಒಟ್ಟು 12 ಜಿಲ್ಲೆಗಳ ರೈತ ಫಲಾನುಭವಿಗಳನ್ನು ಒಂದೆಡೆ ಸೇರಿಸಲು ವಿಶೇಷ ಸಮಾವೇಶವನ್ನು ಆ. 29 ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವೂರು ಕೂಡ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಈ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಲಿದ್ದಾರೆ. ಸುಮಾರು 25 ರಿಂ 30 ಸಾವಿರ ರೈತ ಫಲಾನುಭವಿಗಳು ಅಂದು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಆವರಣದಲ್ಲಿ ಕೃಷಿಭಾಗ್ಯ ಯೋಜನೆಗೆ ಸಂಬಂಧಿತ ಕಾರ್ಯಕ್ರಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಮನವರಿಕೆ ಮಾಡಿಕೊಡಲಾಗುವುದು. ಇದಕ್ಕಾಗಿ ಈಗಾಗಲೆ ಮಾದರಿ ಕೃಷಿ ಹೊಂಡ ನಿರ್ಮಾಣ, ಭತ್ತ ನಾಟಿ ಪ್ರದೇಶವನ್ನು ಸಮಾವೇಶದ ಸ್ಥಳದಲ್ಲಿಯೇ ನಿರ್ಮಿಸಲಾಗುವುದು. ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯಿಸಲಾಗುವುದು. ಒಟ್ಟಾರೆ ರೈತ ಫಲಾನುಭವಿಗಳ ಸಮಾವೇಶವು ಒಂದು ರೈತೋಪಯೋಗಿ ವೈವಿಧ್ಯಮಯ ಕಾರ್ಯಕ್ರಮವಾಗಿ ಮೂಡಿ ಬರಲಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು, ರೈತ ಫಲಾನುಭವಿಗಳ ಸಮಾವೇಶಕ್ಕಾಗಿ ನಿರ್ಮಿಸಲಾಗುತ್ತಿರುವ ಬೃಹತ್ ವೇದಿಕೆ, ಕೃಷಿ ಹೊಂಡ ಮುಂತಾದ ಕಾಮಗಾರಿಗಳನ್ನು ಪರಿಶೀಲಿಸಿದರು.ರಾಜ್ಯದ ಒಣ ಬೇಸಾಯ ಅವಲಂಬಿತ ರೈತರಿಗಾಗಿ ನಮ್ಮ ಸರ್ಕಾರ ಜಾರಿಗೊಳಿಸಿರುವ ಕೃಷಿ ಭಾಗ್ಯ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದ್ದು, ನೆರೆ ಹೊರೆಯ ರಾಜ್ಯದವರೂ ಈ ಯೋಜನೆ ಅಳವಡಿಕೆಗೆ ಉತ್ಸುಕರಾಗಿದ್ದಾರೆ ಎಂದು ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

ಇದೇ ಆಗಸ್ಟ್ 29 ರಂದು ಕೊಪ್ಪಳದಲ್ಲಿ ಕೃಷಿ ಭಾಗ್ಯ ಯೋಜನೆಯ ಉತ್ತರ ಕರ್ನಾಟಕದ 12 ಜಿಲ್ಲೆಗಳ ರೈತ ಫಲಾನುಭವಿ ಸಮಾವೇಶ ನಡೆಯುವ ಸ್ಥಳದ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದ ಒಣ ಬೇಸಾಯ ಅವಲಂಬಿತ ರೈತರು, ಮಳೆ ಕೊರತೆಯಾಗಿ ಸಂಕಷ್ಟ ಅನುಭವಿಸುವ ರೈತರ ನೆರವಿಗೆ ಬರಬೇಕೆಂಬ ಉದ್ದೇಶದಿಂದ ಸರ್ಕಾರ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಮಳೆಯ ನೀರು ವ್ಯರ್ಥವಾಗಿ ಹರಿದು ಹೋಗದಂತೆ ಕೃಷಿ ಹೊಂಡಗಳ ಮೂಲಕ ಸಂಗ್ರಹಿಸಿ, ಮಳೆಯ ಕೊರತೆ ಸಂದರ್ಭದಲ್ಲಿ ಈ ನೀರು ಉಪಯೋಗಿಸಿಕೊಂಡು, ರೈತರು ಆರ್ಥಿಕವಾಗಿ ಸಬಲರಾಗಬಹುದಾಗಿದೆ. ನಂತರ ಪಾಲಿ ಹೌಸ್ ಅಳವಡಿಸಿಕೊಂಡು, ಕಡಿಮೆ ನೀರು ಬಳಸಿ, ಶೇ. 30 ರಿಂದ 40 ರಷ್ಟು ಹೆಚ್ಚು ಇಳುವರಿ ಪಡೆಯಬಹುದಾಗಿದೆ. ಈಗಾಗಲೆ ಕೃಷಿ ಭಾಗ್ಯ ಯೋಜನೆ ಜಾರಿಯಾಗಿ ಸುಮಾರು ಎರಡು ವರ್ಷಗಳಾಗಿದ್ದು, ರಾಜ್ಯದ ಅಂದಾಜು 01 ಲಕ್ಷ ರೈತ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆದುಕೊಂಡಿದ್ದಾರೆ. ಅದರಲ್ಲೂ ಹೆಚ್ಚಾಗಿ ಉತ್ತರ ಕರ್ನಾಟಕ ರಾಜ್ಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ರೈತರು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

ದೇಶದಲ್ಲಿಯೇ ಇಂತಹ ಯೋಜನೆಯನ್ನು ಮೊದಲ ಬಾರಿಗೆ ಜಾರಿಗೊಳಿಸಿರುವ ಕೀರ್ತಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ. ಇಡೀ ದೇಶಕ್ಕೆ ಈ ಯೋಜನೆ ಮಾದರಿಯಾಗಿದ್ದು, ಈಗಾಗಲೆ ಈ ಯೋಜನೆಯನ್ನು ನೆರೆಯ ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳು ಅಳವಡಿಸಿಕೊಳ್ಳಲು ಉತ್ಸುಕವಾಗಿವೆ. ಕೇಂದ್ರ ಸರ್ಕಾರವೂ ಕೂಡ ಈ ಯೋಜನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದು, ಯೋಜನೆಯ ರೂಪುರೇಷೆಗಳನ್ನು ರಾಜ್ಯ ಸರ್ಕಾರದಿಂದ ಪಡೆದಿದೆ. ಕೃಷಿ ಭಾಗ್ಯ ಯೋಜನೆಯನ್ನು ರೈತರಿಗಾಗಿ ಸಮರ್ಪಣೆಗೊಳಿಸಲು, ಈ ಯೋಜನೆಯ ಸೌಲಭ್ಯ ಪಡೆದು, ಲಾಭ ಕಂಡುಕೊಂಡಿರುವ ರೈತರು, ಇನ್ನಷ್ಟು ರೈತರಿಗೆ ಪ್ರೇರೇಪಣೆ ನೀಡಲಿ, ಪ್ರಗತಿಪರ ರೈತರು ತಮ್ಮ ತಮ್ಮ ನಡುವೆ ವಿಚಾರ ವಿನಿಮಯ ಮಾಡಿಕೊಂಡು, ಕೃಷಿ ಕ್ಷೇತ್ರವನ್ನು ಇನ್ನಷ್ಟು ಸಬಲಗೊಳಿಸಲಿ ಎನ್ನುವ ಉದ್ದೇಶಕ್ಕಾಗಿಯೇ ಉತ್ತರ ಕರ್ನಾಟಕದ ಒಟ್ಟು 12 ಜಿಲ್ಲೆಗಳ ರೈತ ಫಲಾನುಭವಿಗಳನ್ನು ಒಂದೆಡೆ ಸೇರಿಸಲು ವಿಶೇಷ ಸಮಾವೇಶವನ್ನು ಆ. 29 ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವೂರು ಕೂಡ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಈ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಲಿದ್ದಾರೆ. ಸುಮಾರು 25 ರಿಂ 30 ಸಾವಿರ ರೈತ ಫಲಾನುಭವಿಗಳು ಅಂದು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಆವರಣದಲ್ಲಿ ಕೃಷಿಭಾಗ್ಯ ಯೋಜನೆಗೆ ಸಂಬಂಧಿತ ಕಾರ್ಯಕ್ರಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಮನವರಿಕೆ ಮಾಡಿಕೊಡಲಾಗುವುದು. ಇದಕ್ಕಾಗಿ ಈಗಾಗಲೆ ಮಾದರಿ ಕೃಷಿ ಹೊಂಡ ನಿರ್ಮಾಣ, ಭತ್ತ ನಾಟಿ ಪ್ರದೇಶವನ್ನು ಸಮಾವೇಶದ ಸ್ಥಳದಲ್ಲಿಯೇ ನಿರ್ಮಿಸಲಾಗುವುದು. ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯಿಸಲಾಗುವುದು. ಒಟ್ಟಾರೆ ರೈತ ಫಲಾನುಭವಿಗಳ ಸಮಾವೇಶವು ಒಂದು ರೈತೋಪಯೋಗಿ ವೈವಿಧ್ಯಮಯ ಕಾರ್ಯಕ್ರಮವಾಗಿ ಮೂಡಿ ಬರಲಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು, ರೈತ ಫಲಾನುಭವಿಗಳ ಸಮಾವೇಶಕ್ಕಾಗಿ ನಿರ್ಮಿಸಲಾಗುತ್ತಿರುವ ಬೃಹತ್ ವೇದಿಕೆ, ಕೃಷಿ ಹೊಂಡ ಮುಂತಾದ ಕಾಮಗಾರಿಗಳನ್ನು ಪರಿಶೀಲಿಸಿದರು.

ಕೊಪ್ಪಳ ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...