Oyorooms IN

Friday, 24th February, 2017 11:23 AM

BREAKING NEWS

ಪ್ರಮುಖ ಸುದ್ದಿಗಳು

2,480 ಕೋಟಿ ರುಪಾಯಿ ಕರ್ನಾಟಕದಿಂದ ಪರಿಹಾರ ಕೇಳಿದ ತಮಿಳುನಾಡು

ಚೆನ್ನೈ: ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ಕರ್ನಾಟಕಕ್ಕೆ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಇದೀಗ ಮತ್ತೊಂದು ತಗಾದೆ ತೆಗೆದಿದೆ. ಕರ್ನಾಟಕದಿಂದ ತನಗೆ 2,480 ಕೋಟಿ ರೂ ಪರಿಹಾರ ಸಿಗಬೇಕೆಂದು ಆಗ್ರಹಿಸಿದೆ. ಸುಪ್ರೀಂಕೋರ್ಟ್ ಆದೇಶ ನೀಡಿದರೂ ಕರ್ನಾಟಕವು ತಮಿಳುನಾಡಿಗೆ ನಿಗದಿತ ಪ್ರಮಾಣದಲ್ಲಿ ಕಾವೇರಿ ನೀರು ಬಿಡುತ್ತಿಲ್ಲ. ಇದು ಸರ್ವೋಚ್ಚ ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ. ಜೊತೆಗೆ, ಕರ್ನಾಟಕದಿಂದ ತನಗೆ ಸಿಗಬೇಕಾದ ನೀರು ಬರದೇ ಹೋಗಿದ್ದರಿಂದ ತಮಿಳುನಾಡಿಗೆ ಸಾಕಷ್ಟು ನಷ್ಟವಾಗಿದೆ.

ಹೀಗಾಗಿ, ಪರಿಹಾರ ಒದಗಿಸಿಕೊಡಬೇಕು ಎಂದು ತಮಿಳುನಾಡು ರಾಜ್ಯವು ಸುಪ್ರೀಂಕೋರ್ಟ್’ಗೆ ಮನವಿ ಮಾಡಿಕೊಂಡಿದೆ. ಇದೇ ವೇಳೆ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ಇನ್ನೊಂದು ವಾರದಲ್ಲಿ ಸಾಕ್ಷ್ಯಗಳ ಪಟ್ಟಿ ಸಲ್ಲಿಸುವಂತೆ ಆದೇಶಿಸಿದೆ.ಜಲ ವಿವಾದದ ವ್ಯಾಜ್ಯ ಇತ್ಯರ್ಥವಾಗುವವರೆಗೆ ನಿತ್ಯ ಎರಡು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಸ್ಟಾರ್ ಹೀರೋ ಹಲ್ಲೆ ನಡೆಸಿದ ಎಂದ ನಟಿಮಣಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್...


ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...