Oyorooms IN

Wednesday, 29th March, 2017 10:58 AM

BREAKING NEWS

ಚಾಮರಾಜನಗರ

ಚಾಮರಾಜನಗರ: ಹೆಣ್ಣು ಮಗುವಿಗೆ ಜನ್ಮ ನೀಡಿದ 5ನೇ ತರಗತಿ ವಿದ್ಯಾರ್ಥಿನಿ

ಚಾಮರಾಜನಗರ: ಹೆಣ್ಣು ಮಗುವಿಗೆ ಜನ್ಮ ನೀಡಿದ 5ನೇ ತರಗತಿ ವಿದ್ಯಾರ್ಥಿನಿ

ಚಾಮರಾಜನಗರ: 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣುಮಗುವಿಗೆ ಜನ್ಮ ನೀಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗಿರಿಜನರ ಆಶ್ರಮ ಶಾಲೆಯಲ್ಲಿ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಗಿರಿಜನರ ಆಶ್ರಮ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಆಗಸ್ಟ್ 25 ರಂದು ಹೊಟ್ಟೆ ನೋವು ಕಾಣಿಸಿಕೊಂಡಿದೆ, ತಕ್ಷಣ ಆಶ್ರಮ ಶಾಲೆಯ ಸಿಬ್ಬಂದಿ ಈಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿನಿ ಶನಿವಾರದಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಬಾಲಕಿ ಮೂಲತಃ ಮಲೆಮಹದೇಶ್ವರ ಬೆಟ್ಟ ಸಮೀಪದ ಮೆದುಗನಾಣೆ ಹಾಡಿಯವಳಾಗಿದ್ದು, ಎರಡು ವರ್ಷ ಶಾಲೆಗೆ ಬಂದಿರಲಿಲ್ಲ. ವಿದ್ಯಾರ್ಥಿನಿಯ ಸ್ಥಿತಿಗೆ ಈಕೆಯ ಮಾವ ಕಾರಣ ಎನ್ನಲಾಗುತ್ತಿದೆ.

ಘಟನೆ ಬಗ್ಗೆ ಆಶ್ರಮಶಾಲೆಯ ವಾರ್ಡನ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೊಳ್ಳೇಗಾಲ ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಜವಾದ್ ಅಹಮದ್ ಆಶ್ರಮ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವರದಿ : ಎಸ್.ವೀರಭದ್ರಸ್ವಾಮಿ

ಚಾಮರಾಜನಗರ ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...