Oyorooms IN

Monday, 24th July, 2017 10:10 PM

BREAKING NEWS

ಚಿಕ್ಕಬಳ್ಳಾಪುರ

ಎಪಿಎಂಸಿ ಮತದಾರರ ಪಟ್ಟಿಯಲ್ಲಿ ಲೋಪದೋಷ ಶಿಡ್ಲಘಟ್ಟ ತಹಶೀಲ್ದಾರ್ ಅಮಾನತ್ತು

man

ಶಿಡ್ಲಘಟ್ಟ: ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಕೃಷಿಕರಲ್ಲದ ವ್ಯಕ್ತಿಗಳನ್ನು ಅಕ್ರಮವಾಗಿ ಹೆಸರುಗಳನ್ನು ಸೇರಿಸಿ ಕರ್ತವ್ಯಲೋಪವೆಸಗಿದ ಆರೋಪದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಗ್ರೇಡ್-1 ಕೆ.ಎಂ.ಮನೋರಮಾ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಎಪಿಎಂಸಿ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಸರಕಾರಿ ಜಮೀನುಗಳು ಮತ್ತು ಸ್ಮಶಾನಗಳ ಪಹಣಿಗಳನ್ನು ನೀಡಿ ಕೃಷಿಕರಲ್ಲದ ವ್ಯಕ್ತಿಗಳನ್ನು ಅಕ್ರಮವಾಗಿ ಸೇರಿಸಲಾಗಿದೆ ಎಂದು ಆರೋಪಿಸಿ ಇತ್ತೀಚಿಗೆ ಶಾಸಕ ರಾಜಣ್ಣ ಮತ್ತು ಜೆ.ಡಿ.ಎಸ್ ಕಾರ್ಯಕರ್ತರು ತಾಲೂಕು ಕಛೇರಿಯ ಮುಂದೆ ಅಹೋರಾತ್ರಿ ಧರಣಿ ನಡೆಸಿದರು.

ಈ ಕುರಿತು ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಗಳಿಂದ ತನಿಖೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಶಾಸಕರು ಅಹೋರಾತ್ರಿ ಧರಣಿಯನ್ನು ವಾಪಸ್ಸು ಪಡೆದಿದ್ದರು.

ಮತದಾರರ ಪಟ್ಟಿಯಲ್ಲಿ ಲೋಪದೋಷ ನಡೆದಿರುವ ಕುರಿತು ಉಪವಿಭಾಗಾಧಿಕಾರಿ ಪರಶಿವಮೂರ್ತಿ ವರದಿಯ ಹಿನ್ನೆಲೆಯಲ್ಲಿ ರಾಜಸ್ವ ನಿರೀಕ್ಷಕ ಸುಭ್ರಮಣಿ,ಗ್ರಾಮ ಲಕ್ಕಾಧಿಕಾರಿ ಲಾರೆನ್ಸ್ ಹಾಗೂ ಚುನಾವಣೆಯ ಶಾಖೆಯ ಅಧಿಕಾರಿ ನಾಗೇಶ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿತ್ತು ಮತದಾರರ ಪಟ್ಟಿಯನ್ನು ಪರಿಶೀಲಿಸದೆ ನಿರ್ಲಕ್ಷ್ಯವಹಿಸಿರುವ ತಹಶೀಲ್ದಾರ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಬೆಳಗಾವಿಯ ಅಧಿವೇಶನದಲ್ಲಿ ಶಾಸಕ ರಾಜಣ್ಣ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಸರಕಾರ ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ವರದಿಯನ್ನು ಆಧರಿಸಿ ತಹಶೀಲ್ದಾರ್ ಕೆ.ಎಂ.ಮನೋರಮಾ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕಂದಾಯ ಸಚಿವರಿಗೆ ಅಭಿನಂದಿಸಿದ ಶಾಸಕ: ಎಪಿಎಂಸಿ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿ ತಹಶೀಲ್ದಾರ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲು ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರು ಆದೇಶಿಸಿರುವುದಕ್ಕಾಗಿ ಅಭಿನಂದಿಸುವುದಾಗಿ ಶಾಸಕ ಎಂ.ರಾಜಣ್ಣ ಹೇಳಿದರು.

ಚಿಕ್ಕಬಳ್ಳಾಪುರ ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...