Oyorooms IN

Saturday, 21st January, 2017 9:01 PM

BREAKING NEWS

ಕೊಡಗು

ಹಾರಂಗಿ ಜಲಾಶಯ; ಜಿಲ್ಲಾ ಉಸ್ತುವಾರಿ ಸಚಿವರಿಂದ ಬಾಗಿನ ಅರ್ಪಣೆ

bagina

ಮಡಿಕೇರಿ : ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವೀಣಾ ಅಚ್ಚಯ್ಯ ಅವರು ಶನಿವಾರ ಹಾರಂಗಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು.

ಹಾರಂಗಿ ಜಲಾಶಯದಲ್ಲಿನ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ಬಾಗಿನ ಅರ್ಪಿಸಿದ ಸಚಿವರು, ಕಾವೇರಿ ನದಿ ಪಾತ್ರದ ಪ್ರಮುಖ ಜಲಾಶಯಗಳಲ್ಲಿ ಹಾರಂಗಿ ಜಲಾಶಯ ಭರ್ತಿಯಾಗಿದೆ.ಕಾವೇರಿ ಕಣಿವೆ ಸೇರಿದಂತೆ ನಾಡಿನಲ್ಲಿ ಉತ್ತಮ ಮಳೆಯಾಗಿ ನಾಗರಿಕರಲ್ಲಿ ಸುಖ-ಸಮೃದ್ಧಿ ತರುವಂತಾಗಲಿ ಎಂದು ಜಿಲ್ಲಾ ಸಚಿವರು ಆಶಿಸಿದರು.

ಹಾರಂಗಿ ಜಲಾಶಯದ ಉದ್ಯಾನವನವೀಕ್ಷಣೆಗೆ ಇಂದಿನಿಂದಲೇ ಅವಕಾಶ ನೀಡಲಾಗಿದೆ. ಉದ್ಯಾನವನಕ್ಕೆ ಆರು ತಿಂಗಳವರೆಗೆ ಉಚಿತ ಪ್ರವೇಶಾವಕಾಶ ನೀಡಲಾಗುವುದು. ನಂತರ ಶುಲ್ಕ ನಿಗಧಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಹಾರಂಗಿ ಜಲಾಶಯ ಸಲಹಾ ಸಮಿತಿ ಸಭೆಯು ಸೋಮವಾರ ಬೆಂಗಳೂರಿನಲ್ಲಿ ನಡೆಯಲಿದ್ದು, ಆ ಸಭೆಯಲ್ಲಿ ಕಂಬಿಬಾಣೆ ರಸ್ತೆ ಅಭಿವೃದ್ಧಿ, ಚಿಕ್ಲಿಹೊಳೆ ಜಲಾಶಯದಿಂದ ಕಾಲುವೆಗೆ ನೀರು ಹರಿಸುವುದು ಮತ್ತಿತರ ನಾನಾ ಅಭಿವೃದ್ಧಿ ಕಾರ್ಯಗಳ ಸಂಬಂಧ ಚಚರ್ೆ ನಡೆಯಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಹೇಳಿದರು.

ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಕೃಷಿಕರು, ಕಾರ್ಮಿಕರು ಹೀಗೆ ಎಲ್ಲರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಜನರ ಸಹಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ. ರಿಚಡರ್್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ ಸಿ.ಇ.ಓ ಚಾರುಲತಾ ಸೋಮಲ್, ಉಪ ವಿಭಾಗಧಿಕಾರಿ ಡಾ.ನಂಜುಂಡೇ ಗೌಡ, ಜಿ.ಪಂ.ಸದಸ್ಯರಾದ ಕೆ.ಪಿ.ಚಂದ್ರಕಲಾ, ಲತೀಫ್, ಪ್ರಮುಖರಾದ ಬಿ.ಟಿ.ಪ್ರದೀಪ್, ಕೆ.ಎಂ.ಲೋಕೇಶ್ ಮತ್ತಿತರರು ಇದ್ದರು.

ಕೊಡಗು ಇನ್ನಷ್ಟು