Oyorooms IN

Tuesday, 25th April, 2017 2:00 PM

BREAKING NEWS

ರಾಜ್ಯ

“ಕೈ” ಬಿಟ್ಟು ಕಮಲ ಹಿಡಿಯಲಿರುವ ಕುಮಾರ್ ಬಂಗಾರಪ್ಪ.!!

ಶಿವಮೊಗ್ಗ: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಿದ್ಧತೆ ಆರಂಭಿಸಿರುವ ಬಿಜೆಪಿ, ಚುನಾವಣೆಗೆ ಮೊದಲೇ ಪಕ್ಷಕ್ಕೆ ಮುಖಂಡರುಗಳನ್ನು ಸೇರಿಸಿಕೊಳ್ಳುವ ಮೂಲಕ ಪಕ್ಷದ ಬಲವರ್ಧನೆಗೆ ಗಮನ ಹರಿಸಿದ್ದು, ವರ್ಣರಂಜಿತ ರಾಜಕಾರಣಿ ಬಂಗಾರಪ್ಪ ಅವರ ಪುತ್ರ ಕುಮಾರ್ ಬಂಗಾರಪ್ಪ ಅವರನ್ನು ಬಿಜೆಪಿ ಸೇರಿಕೊಳ್ಳಲು ಆಸಕ್ತಿ ತೋರಿದೆ ಎನ್ನುವ ಮಾತುಗಳು ಹೇಳಿಬಂದಿವೆ.

ಶಿವಮೊಗ್ಗದಲ್ಲಿ ಪಕ್ಷದ ಮೇಲೆ ಹಿಡಿತ ಸಾಧಿಸುವ ದೃಷ್ಟಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕುಮಾರ್ ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಬಂಗಾರಪ್ಪ ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

kumar-bangarappa-%e0%b2%95%e0%b3%81%e0%b2%ae%e0%b2%be%e0%b2%b0%e0%b3%8d-%e0%b2%ac%e0%b2%82%e0%b2%97%e0%b2%be%e0%b2%b0%e0%b2%aa%e0%b3%8d%e0%b2%aa

ಸದ್ಯ ಕಾಂಗ್ರೆಸ್ ನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಸ್ಥಿತಿಯಲ್ಲಿರುವ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರನ್ನು, ಬಂಗಾರಪ್ಪ ಅವರನ್ನು ಬಿಜೆಪಿಗೆ ಕರೆತಂದಂತೆ ಕರೆ ತರಲು ಬಿಜೆಪಿ ಪ್ರಯತ್ನಿಸಿದ್ದು, ಮಾಜಿ ಸಚಿವರಾಗಿದ್ದ ಕುಮಾರ್ ಬಂಗಾರಪ್ಪ, ತಂದೆ ಹಾಗೂ ತಮ್ಮನ ನಡುವಿನ ಮನಸ್ತಾಪದಿಂದಾಗಿ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ.

ಕಳೆದ ಎರಡು ಚುನಾವಣೆಯಲ್ಲಿ ಪರಾಭವಗೊಂಡಿದ್ದ ಕುಮಾರಬಂಗಾರಪ್ಪರಿಗೆ ಪಕ್ಷದಲ್ಲಿ ಹೇಳಿಕೊಳ್ಳುವಂತಹ ಸ್ಥಾನಮಾನ ಸಿಕ್ಕಿಲ್ಲ, ಶಿವಮೊಗ್ಗದಲ್ಲಿ ಹಿರಿಯ ಮುಖಂಡ, ಸಚಿವ ಕಾಗೋಡು ತಿಮ್ಮಪ್ಪ ಅವರ ಮಾತೇ ಅಂತಿಮ ಅನ್ನುವಂತಹ ಸ್ಥಿತಿ ನಿರ್ಮಾಣಗೊಂಡಿದ್ದು, ಇವೆಲ್ಲಾ ಕಾರಣದಿಂದ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವಂತೆ ಮಾಡಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

English summary: Bangarappa son kumar Bangarappa join bjp shortly

ರಾಜ್ಯ ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...