Oyorooms IN

Tuesday, 25th April, 2017 3:38 AM

BREAKING NEWS

ಪ್ರಮುಖ ಸುದ್ದಿಗಳು

ರಾಯಣ್ಣ ಬ್ರಿಗೇಡ್ ತಾಕಲಾಟ: ಮಾಜಿ ಮೇಯರ್ ಅಮಾನತು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ನಡುವಿನ ಕೋಲ್ಡ್ ವಾರ್ ಮುಂದುವರೆದಿದ್ದು, ಬಿಎಸ್ ವೈ ಅವರನ್ನು ಸಿಎಂ ಮಾಡುವುದು ಬ್ರಿಗೇಡ್ ಉದ್ದೇಶವಲ್ಲ ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೆ ರಾಯಣ್ಣ ಬ್ರಿಗೇಡ್ ಜೊತೆ ಗುರುತಿಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಪಕ್ಷದಿಂದ ಅಮಾನತುಗೊಳಿಸಿ ಬೆಂಗಳೂರು ಬಿಜೆಪಿ ಘಟಕದ ಅಧ್ಯಕ್ಷ ಸದಾಶಿವ ಅವರು ಆದೇಶ ಹೊರಡಿಸಿದ್ದಾರೆ.

ಈಶ್ವರಪ್ಪ ಅವರ ಬೆಂಬಲಕ್ಕೆ ನಿಂತಿರುವ ಮುಖಂಡರನ್ನು ಅಮಾನತುಗೊಳಿಸುವ ಮೂಲಕ ಈಶ್ವರಪ್ಪ ಬಣಕ್ಕೆ ಬಿಎಸ್ ವೈ ಬಿಸಿ ಮುಟ್ಟಿಸಿದ್ದಾರೆ. ಬಿಎಸ್ ವೈ ವಿರುದ್ಧ ಬಹಿರಂಗವಾಗಿ ತೊಡೆತಟ್ಟಿದ್ದ ಈಶ್ವರಪ್ಪ ಅವರ ಬೆಂಬಲಿಗರನ್ನು ಪಕ್ಷದಿಂದ ಅಮಾನತು ಮಾಡುವ ಮೂಲಕ, ಇಬ್ಬರು ನಾಯಕರ ನಡುವಿನ ಸಮರ ತಾರಕಕ್ಕೇರಿದೆ.

English summary: BBMP ex Mayer venkatesh murthy suspended form bjp

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...