Oyorooms IN

Tuesday, 25th April, 2017 2:10 PM

BREAKING NEWS

ತುಮಕೂರು

ಬಿಜೆಪಿ ಅಧಿಕಾರಕ್ಕೆ ಬಂದರೆ 7ನೇ ವೇತನಜಾರಿ: ಬಿ.ಎಸ್.ವೈ

ತುಮಕೂರು: ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮರುಕ್ಷಣದಲ್ಲಿಯೇ 7ನೇ ವೇತನ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಸರಕಾರಿ ನೌಕರರಿಗೆ 7ನೇ ವೇತನ ಆಯೋಗ ರಚಿಸುವುದಾಗಿ ಹೇಳಿ ನೌಕರರ ಮೂಗಿಗೆ ತುಪ್ಪು ಸವರುವ ಕೆಲಸ ಮಾಡುತ್ತಿದೆ.ಈ ಹಿಂದೆ ನಾನು ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿ ಆಗಿದ್ದ ವೇಳೆ ಸರಕಾರಿ ನೌಕರರಿಗೆ 5 ಮತ್ತು 6ನೇ ವೇತನ ಆಯೋಗವನ್ನು ಜಾರಿಗೊಳಿಸಿದ್ದೇ.ಇದನ್ನು ನಮ್ಮ ಶಿಕ್ಷಕ ಬಂಧುಗಳು ಮರೆತಿಲ್ಲ. ಶಿಕ್ಷಕರ ಕ್ಷೇತ್ರದ ಈ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದರು.

ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಇದ್ದ ಅನುದಾನವನ್ನು ೭ಸಾವಿರ ಕೋಟಿಯಿಂದ 17 ಸಾವಿರ ಕೋಟಿಗೆ ಹೆಚ್ಚಿಸಲಾಯಿತು.ಇದರಿಂದಾಗಿ 8 ಸಾವಿರ ಸಹಶಿಕ್ಷಕರು,4 ಸಾವಿರ ಪಿಯು ಶಿಕ್ಷಕರು,6೦೦೦ ಜೆಓಸಿ ಶಿಕ್ಷಕರ ಖಾಯಂ,2000ಅರೆಕಾಲಿಕ ಉಪನ್ಯಾಸಕ ಖಾಯಂ ಹಾಗೂ 434 ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಶಿಕ್ಷಕರ ನೇಮಕ ಮಾಡಲಾ ಯಿತು.ಈ ವಿಚಾರವನ್ನು ಮತದಾರರ ಮುಂದಿಟ್ಟು ಮತ ಕೇಳುವ ಕೆಲಸವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು, ಅಭ್ಯರ್ಥಿಗಳು ಮಾಡಬೇಕು.ಕೇಂದ್ರ ಸರಕಾರದ ಸಾಧನೆ ಮತ್ತು ರಾಜ್ಯ ಸರಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ವ್ಮತಯಾಚಿಸುವ ಮೂಲಕ ಪ್ರಧಾನಿ ನರೇಂದ್ರಮೋದಿ ಅವರ ಕೈ ಬಲಪಡಿಸಬೇಕೆಂದು ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಎಲ್ಲಾ ರಂಗದಲ್ಲಿಯೂ ವಿಫಲವಾಗಿದೆ.ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ತೋರಿದ ಆತುರವನ್ನು ಬರ ನಿರ್ವಹಣೆಗೆ ತೋರುತ್ತಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.ಕೊಲೆ, ಸುಲಿಗೆ,ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಮಹಿಳೆಯರು ನಿರ್ಭೀತಿಯಿಂದ ಓಡಾಡದ ಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಗೃಹ ಮಂತ್ರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ,ಅಪರಾಧಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರ ಹಲವು ವರ್ಷಗಳಿಂದ ಬಿಜೆಪಿ ಕೈಯಲ್ಲಿದೆ. ಈ ಕ್ಷೇತ್ರದಿಂದ ಎರಡು ಬಾರಿ ಶಾಸಕ ವೈ.ಎ.ನಾರಾಯಣಸ್ವಾಮಿ ಗೆಲುವು ಸಾಧಿಸಿದ್ದು, ಈಗಲೂ ಈ ಕ್ಷೇತ್ರದ ಮೇಲೆ ಹಿಡಿತ ಹೊಂದಿದ್ದಾರೆ. ಅವರು ಇನ್ನೂ ಚುರುಕಾಗಿ ಓಡಾಡುವ ಮೂಲಕ ಪಕ್ಷದ ಅಭ್ಯರ್ಥಿ ಪಿ.ಆರ್.ಬಸವರಾಜು ಗೆಲುವಿಗೆ ಶ್ರಮಿಸಬೇಕು.ಇದೇ ಚುನಾವಣೆ ವಿಚಾರವಾಗಿ ಚಿತ್ರದುರ್ಗ, ಧಾವಣಗೆರೆ, ಕೋಲಾರ,ಚಿಕ್ಕಬಳ್ಳಾಪುರದಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಬಿ.ಎಸ್.ವೈ ತಿಳಿಸಿದರು.

ಸರಕಾರ ಬರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕೆರೆ,ಕಟ್ಟೆಗಳಲ್ಲಿ ನೀರಿಲ್ಲ. ಸರಕಾರ ಮುಂಬರುವ ಮಳೆಯ ನೀರನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಕೆರೆಗಳ ಹೂಳು ತೆಗೆಸುವ ಕೆಲಸ ಮಾಡಬೇಕು. ಮಳೆ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದರು.

ವೇದಿಕೆಯಲ್ಲಿ ಶಾಸಕರಾದ ವೈ.ಎ.ನಾರಾಯಣಸ್ವಾಮಿ, ಬಿ.ಸುರೇಶ್‌ಗೌಡ,ಮಾಜಿ ಸಂಸದ ಜಿ.ಎಸ್.ಬಸವರಾಜು,ಜಿಲ್ಲಾ ಬಿಜೆಪಿ ಅಧ್ಯಕ್ಷ ಜೋತಿ ಗಣೇಶ್,ಬಿಜೆಪಿ ಅಭ್ಯರ್ಥಿ ಪಿ.ಆರ್.ಬಸವರಾಜು ಉಪಸ್ಥಿತರಿದ್ದರು

ತುಮಕೂರು ಇನ್ನಷ್ಟು

ಪ್ರಮುಖ ಸುದ್ದಿಗಳುಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...