Oyorooms IN

Tuesday, 28th March, 2017 7:24 PM

BREAKING NEWS

ಪ್ರಮುಖ ಸುದ್ದಿಗಳು

ಕಾಂಗ್ರೆಸ್ ವಾಶ್ ಔಟ್, ಫರೀದಾಬಾದ್ ನಲ್ಲಿ ಬಿಜೆಪಿ ಹೊಸ ಚರಿತ್ರೆ

ಚಂಡೀಗಢ: ಹರಿಯಾಣದ ಫರೀದಾಬಾದ್ ನಗರಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸಿದ್ದು, ಪಾಲಿಕೆಯ 40 ಕ್ಷೇತ್ರಗಳಲ್ಲಿ ಬಿಜೆಪಿ ಮೂವತ್ತು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಉಳಿದ ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿದರೆ, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹೇಳ ಹೆಸರಿಲ್ಲದಂತೆ ಆಗಿವೆ.

ಪಕ್ಷದ ಅಭಿವೃದ್ಧಿಪರ ಸಿದ್ಧಾಂತಕ್ಕೆ ಸಿಕ್ಕಜಯ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಭಿಪ್ರಾಯಪಟ್ಟಿದ್ದು, ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನೋಟು ರದ್ದು ಕ್ರಮಕ್ಕೆ ಜನರು ನೀಡಿರುವ ಬೆಂಬಲ ಇದು ಎಂದಿದ್ದು, ನೋಟು ರದ್ದುಗೊಳಿಸಿದ ನಂತರವೂ ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವುದು ಪಕ್ಷದ ಮೇಲೆ ಜನರಿಗೆ ಇರುವ ನಂಬಿಕೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಚಂಡೀಗಢ ಸೇರಿದಂತೆ ದೇಶದ ವಿವಿಧ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅದ್ವೀತಿಯ ಗೆಲುವು ಸಾಧಿಸಿದೆ.

English summary: Bjp white wash congress in haryana election

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...