Oyorooms IN

Tuesday, 28th March, 2017 7:28 PM

BREAKING NEWS

ಜಿಲ್ಲಾ ಸುದ್ದಿಗಳು

ನೆಪ ಹೇಳುವುದು ಬಿಟ್ಟು ರೈತರ ಸಾಲ ಮನ್ನಾ ಮಾಡಲಿ: ಬಿಎಸ್ ವೈ

bsy

ಹುಬ್ಬಳ್ಳಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಪಡೆಯುವುದು ನಿಶ್ಚಿತ, ಯಾರು ಏನು ಹೇಳಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ, ರಾಜ್ಯದ ಜನತೆಯ ಹಿತ ಕಾಪಾಡುವುದು ನಮಗೆ ಮುಖ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ  ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ, ರೈತರ ಸಾಲ ಮನ್ನಾಕ್ಕೆ ಯಡಿಯೂರಪ್ಪ ವಿರೋಧವಾಗಿದ್ದಾರೆ ಎನ್ನುವ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ ನಾನು ಅವರಷ್ಟು ದೊಡ್ಡವನ ಎಂದು ಕಾಲೆಳೆದರು.

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ ಸರ್ಕಾರ ಪರಿಹಾರಕ್ಕೆ ಮುಂದಾಗಬೇಕಿದೆ, ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಸಿಎಂ ಬರೀ ನೆಪಗಳನ್ನು ಹೇಳುವುದು ಬಿಟ್ಟು,  ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಸಾಲಗಳನ್ನು ಮನ್ನಾ ಮಾಡಲಿ ಎಂದು ಸವಾಲು ಹಾಕಿದರು, ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಬಿಜೆಪಿ ಬದ್ಧವಾಗಿದ್ದು, ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಕೈಜೋಡಿಸಿದರೆ 24 ಗಂಟೆಗಳಲ್ಲಿ ವಿವಾದ ಬಗೆಹರಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಯೋಜನೆ ಜಾರಿ ಬಗ್ಗೆ ಚರ್ಚೆ ಮಾಡಬೇಕು, ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುವುದನ್ನು ಬಿಟ್ಟು ಸಿಎಂ ಬರ ಪರಿಹಾರ ಕಾರ್ಯವನ್ನು ಚುರುಕುಗೊಳಿಸಲಿ, ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾಗಿರುವುದನ್ನೆಲ್ಲಾ ನೀಡಿದೆ ಎಂದರು, ಮಾಜಿ ಸಚಿವ ಸಿಸಿ ಪಾಟೀಲ, ಮಾಜಿ ಶಾಸಕ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಎಸ್.ಐ ಚಿಕ್ಕನಗೌಡರ ಸೇರಿದಂತೆ ಇತರರು ಜೊತೆಯಲ್ಲಿದ್ದರು.

English summary: bs yeddurappa suggest cm siddaramaiah

ಜಿಲ್ಲಾ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...