Oyorooms IN

Tuesday, 25th April, 2017 4:09 PM

BREAKING NEWS

ದಕ್ಷಿಣ ಕನ್ನಡ

ರಾಜ್ಯದಲ್ಲಿ ಅವಧಿಗೂ ಮುಂಚೆ ಚುನಾವಣೆ, ಸಿದ್ದು ಸರ್ವಾಧಿಕಾರಿ: ಬಿ ಎಸ್ ಯಡಿಯೂರಪ್ಪ

ಮಂಗಳೂರು : ರಾಜ್ಯದಲ್ಲಿ ನಿಗದಿತ ಅವಧಿಗೂ ಮುಂಚಿತವಾಗಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾರ್ಯಕರ್ತರು ಈಗಿನಿಂದಲೇ ಚುನಾವಣೆ ತಯಾರಿಯಲ್ಲಿ ತೊಡಗುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕರೆ ನೀಡಿದ್ದು. ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ
ಕಾಂಗ್ರೆಸ್ ಸರಕಾರ ಮೂರು ತಿಂಗಳ ಮುಂಚೆಯೆ ಚುನಾವಣೆಗೆ ಹೋಗಲಿದೆ, ಕಾಂಗ್ರೆಸ್ ನ ಗೊಂದಲಗಳು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ವರವಾಗಲಿದ್ದು,  ಬಿಜೆಪಿ 150 ಸ್ಥಾನವನ್ನು ಪಡೆಯಲಿದ್ದು, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ  ಹೆಚ್ಚಿನ ಗಮನ ನೀಡುವಂತೆ ಹೇಳಿದರು.

bsy

ರಾಜ್ಯದಲ್ಲಿ ಅಶಾಂತಿಯ ವಾತವರಣವಿದ್ದು ಟಿಪ್ಪು ಜಯಂತಿ ಆಚರಣೆ ನಡೆಸುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಿಸಬಾರದೆಂದ ಅವರು, ಸ್ಟೀಲ್ ಬ್ರಿಡ್ಜ್ ನಲ್ಲಿ 500 ಕೋಟಿ ರೂಪಾಯಿಯನ್ನು ಲೂಟಿ ಮಾಡಲು ಯೋಜನೆಯನ್ನು ಸರಕಾರ ರೂಪಿಸಿದೆ ಎಂದು ಆರೋಪಿಸಿದರು.  ಮಾಜಿ ಸಚಿವ ಶ್ರೀನಿವಾಸ್ ಅವರು ಕಾಂಗ್ರೆಸ್ಸಿನ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನ. 7 ರಂದು ಮೈಸೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಸಂಸದ ನಳಿನ್ಕುಮಾರ್ ಕಟೀಲ್, ವಿಧಾನಪರಿಷತ್ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾಣರ್ಿಕ್, ಪಕ್ಷ ಪ್ರಮುಖರುಗಳಾದ ಕಿಶೋರ್ ರೈ, ಉಮಾನಾಥ ಕೋಟ್ಯಾನ್, ಬ್ರಿಜೇಶ್ ಚೌಟ, ಮಾಜಿ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

English summary:  bsy meeting with south kannada district bjp workers and leaders

ದಕ್ಷಿಣ ಕನ್ನಡ ಇನ್ನಷ್ಟು

ಪ್ರಮುಖ ಸುದ್ದಿಗಳುಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...