Oyorooms IN

Thursday, 17th August, 2017 5:07 PM

BREAKING NEWS

ತುಮಕೂರು

ಸಾಲಮನ್ನಾ ಮಾಡದಿದ್ದರೆ ಹೋರಾಟ ಬಿಎಸ್ ವೈ ಎಚ್ಚರಿಕೆ

ತುಮಕೂರು: ರಾಜ್ಯದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ತೀವ್ರ ಬರಗಾಲ ಆವರಿಸಿದ್ದು, ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದ್ದು, ಮುಂದಿನ ಬಜೆಟ್ ಅಧಿವೇಶನದಲ್ಲಿ ರೈತರ ಸಾಲಮನ್ನಾ ಮಾಡದೇ ಇದ್ದರೆ ಸರ್ಕಾರದ ವಿರುದ್ಧ ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬರಗಾಲದ ಅಧ್ಯಯನ ಪ್ರವಾಸ ಕೈಗೊಂಡಿರುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ   ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ನಿಟ್ಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಗಳಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡರು. ಬಿಜೆಪಿ ನಡೆಸಲಿರುವ ಬರ ಅಧ್ಯಯನದ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲ್ಲಿಸುವುದಾಗಿ ಹೇಳಿದ ಅವರು, ವರದಿಗೆ ಸರ್ಕಾರ ಸ್ಪಂದಿಸದಿದ್ದರೆ ಬೀದಿಗಿಳಿದು ರೈತರ ಪರ ಹೋರಾಟವನ್ನು ಬಿಜೆಪಿ ಹಮ್ಮಿಕೊಳ್ಳಲಿದೆ ಎಂದು ಹೇಳಿದ್ದಾರೆ.

 

ಬರದ ಬಗ್ಗೆ ವಿವರಿಸಲು ನಮಗೆ ಪ್ರಧಾನಮಂತ್ರಿ ಸ್ಪಂಧಿಸಿಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಭೇಟಿಗೆ ಅವಕಾಶ ನೀಡಿದ್ದಾರೆ. ಆದರೆ ನಮ್ಮನ್ನೂ ಸಹ ಕರೆದುಕೊಂಡು ಹೋಗಿ ಬರ ಪರಿಹಾರದ ಬಗ್ಗೆ ಚರ್ಚಿಸಬಹುದಿತ್ತು, ಇದುವರೆಗೂ ಬಿಜೆಪಿ ಪಕ್ಷ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡುತ್ತಲೇ ಬಂದಿದೆ. ಆದರೂ ನಮ್ಮನ್ನು ನಿರ್ಲಕ್ಷಿಸಿದ್ದಾರೆ. ನಾವು ಎರಡು ಭಾರಿ ಸಾಲಮನ್ನಾ ಮಾಡಿದ್ದೇವೆ, ಆದರೆ ರಾಜ್ಯ ಸರ್ಕಾರ ಇದುವರೆಗೂ ಸಾಲಮನ್ನಾ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ, ಸಾಲಮನ್ನಾ ಮಾಡಿ ಎಂದರೆ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುತ್ತಾರೆ. ಇಲ್ಲಿಯವರೆಗೂ ರಾಜ್ಯ ಸರ್ಕಾರ ರೈತರಿಗೆ ಏನು ಮಾಡಿದೆ ಎಂದು ಪ್ರಶ್ನಿಸಿದರು.

ಜ.2 ಕ್ಕೆ ಶ್ರೀನಿವಾಸ್ ಪ್ರಸಾದ್ ಬಿಜೆಪಿ : ಬರುವ ಜನವರಿ ೨ ರಂದು ಮಾಜಿ ಸಚಿವ ಶ್ರೀನಿವಾಸ್‌ಪ್ರಸಾದ್ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದು.ಚಾಮರಾಜನಗರ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಶ್ರೀನಿವಾಸ ಪ್ರಸಾದ್ ಅವರೇ ಅಭ್ಯರ್ಥಿಯಾಗಿದ್ದು, ಅವರ ಗೆಲುವಿಗೆ ಪಕ್ಷದ ಎಲ್ಲಾ ಮುಖಂಡರು ಶ್ರಮಿಸಲಿದ್ದಾರೆ, ಶ್ರೀನಿವಾಸ್‌ಪ್ರಸಾದ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರ ಅಧ್ಯಯನ ಪ್ರವಾಸಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಕೈಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈಶ್ವರಪ್ಪ ಅವರು ತುಂಬಾ ಬ್ಯುಸಿಯಾಗಿದ್ದಾರೆ. ಆ ಬ್ಯುಸಿಯಲ್ಲೇ ಅವರು ಆರಾಮಾಗಿ ಓಡಾಡಿಕೊಂಡಿರಲಿ ಎನ್ನುವ ದೃಷ್ಠಿಯಿಂದ ನಾವು ಬರ ಪ್ರವಾಸದ ತಂಡಕ್ಕೆ ಆಯ್ಕೆಮಾಡಿಕೊಂಡಿಲ್ಲ ಎಂದರು.
ರಾಯಣ್ಣ ಬ್ರಿಗೇಡ್ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ, ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದಷ್ಟೇ ಉತ್ತರಿಸಿದರು.

ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಡಿ.ಎಸ್. ವೀರಯ್ಯ, ಶಾಸಕ ಬಿ.ಸುರೇಶ್‌ಗೌಡ, ಮಾಜಿಸಂಸದ ಜಿ.ಎಸ್. ಬಸವರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಬಿ. ಜ್ಯೋತಿಗಣೇಶ್, ಜಿಪಂ ಸದಸ್ಯ ವೈ.ಎಚ್. ಹುಚ್ಚಯ್ಯ, ಮುಖಂಡರಾದ ಶಿವಪ್ರಸಾದ್, ಬ್ಯಾಟರಂಗೇಗೌಡ, ಹೆಬ್ಬಾಕರವಿ, ಹಾಲನೂರು ಲೇಪಾಕ್ಷ್ ಮೊದಲಾದವರು ಹಾಜರಿದ್ದರು.

English summary:  Bsy visit siddaganga matt, government neglect drought

ತುಮಕೂರು ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...