Oyorooms IN

Wednesday, 24th May, 2017 1:13 AM

BREAKING NEWS

ಚಿತ್ರದುರ್ಗ

ಚಿತ್ರದುರ್ಗ ಕೆಎಸ್‍ಆರ್‍ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಿತ್ರದುರ್ಗ ಕೆಎಸ್‍ಆರ್‍ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಕೆಎಸ್‍ಆರ್‍ಟಿಸಿ ಬಸ್ ಪಲ್ಟಿ ಆದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಬಾಲಕರು ಸೇರಿ 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವ  ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಚನ್ನಮನಹಳ್ಳಿ  ಬಳಿ ನಡೆದಿದೆ.

ಗುಲ್ಬರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎ-32-ಎಫ್- 2075 ಸಂಖ್ಯೆಯ ಕೆಎಸ್‍ಆರ್‍ಟಿಸಿ ಬಸ್ ಇದಾಗಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ವೇಗವಾಗಿದ್ದ ಬಸ್ ನಿಯಂತ್ರಣಕ್ಕೆ ಬಂದಿಲ್ಲ. ಗಾಬರಿಗೊಂಡ ಚಾಲಕ ಹೆದ್ದಾರಿಯಿಂದ ಪಕ್ಕ ಬಸ್ ನಿಲ್ಲಿಸಲು ಮುಂದಾದಾಗ ಬಸ್ ಪಲ್ಟಿಯಾಗಿದೆ. ಗುಲ್ಬರ್ಗ ದಿಂದ ಚಳ್ಳಕೆರೆ ಹಿರಿಯೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು.

ದುರಂತದಲ್ಲಿ 8 ಕ್ಕೂ ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಮಂಗಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...