Oyorooms IN

Saturday, 22nd July, 2017 4:25 PM

BREAKING NEWS

ಪ್ರಮುಖ ಸುದ್ದಿಗಳು

ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜೀನಾಮೆ ಪರ್ವ: ಬಿಎಸ್ ವೈ ಭವಿಷ್ಯ

ಶಿವಮೊಗ್ಗ : ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವ ರಾಜ್ಯ ಸರಕಾರದ 3 ಮಂದಿ ಸಚಿವರು ಶೀಘ್ರ ರಾಜೀನಾಮೆ ನೀಡಲಿದ್ದು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ರಾಜ್ಯ ಸರಕಾರದ ಸಚಿವರುಗಳು ದೊಡ್ಡ ಹಗರಣಗಳಲ್ಲಿ ಭಾಗಿಯಾಗಿದ್ದು ಕೆಲವರಿಗೆ ಮುಂದಿನ ದಿನಗಳಲ್ಲಿ ಶಿಕ್ಷೆಯಾಗಲಿದೆ ಎಂದರು.
ಎತ್ತಿನಹೊಳೆ ಹಗರಣ, ಸ್ಟೀಲ್ ಬ್ರಿಡ್ಜ್ ಹಗರಣದಲ್ಲಿ ಸಚಿವರುಗಳು ಭಾರಿ ಕಮಿಷನ್ ಪಡೆದಿರುವುದು ಕಂಡು ಬಂದಿದೆ. ಐಟಿ ದಾಳಿಯಲ್ಲಿ ಸಿಕ್ಕಿ ಬಿದ್ದಿರುವ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರೊಂದಿಗೆ ಸಂಪುಟದ ಸಚಿವರು ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆ ಎಂದರು.

ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,  ಅವರ ಸಂಪುಟದಲ್ಲಿರುವ ಜೈಲಿಗೆ ಹೋಗುವ ಸಚಿವರ ಹೆಸರು ಮೊದಲು ಬಹಿರಂಗಪಡಿಸಲಿ. ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಸಿಕ್ಕಿ ಬಿದ್ದಿರುವ ಅಧಿಕಾರಿಗಳೊಂದಿಗೆ ಶಾಮೀಲಾಗಿರುವ ಸಚಿವರುಗಳ ಹೆಸರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ನಾನು ಪ್ರತಿಕ್ರಿಯಿಸಲು ಹೋಗುವುದಿಲ್ಲ. ಈಗಾಗಲೇ ಹಲವು ಭಾರಿ ಈಶ್ವರಪ್ಪ ಅವರಿಗೆ ಎಚ್ಚರಿಕೆ ನೀಡಲಾಗಿದೆ. ಕೇಂದ್ರ ನಾಯಕರು ಎಲ್ಲವನ್ನೂ ಗಮನಿಸುತ್ತಿದ್ದು ಅವರೇ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ಇದೇ ವೇಳೆ ಈಶ್ವರಪ್ಪ ಅವರಿಗೆ ಪಕ್ಷದ ವತಿಯಿಂದ ಯಾವುದೇ ನೊಟೀಸ್ ನೀಡಿಲ್ಲ ಎಂದು ತಿಳಿಸಿದರು.

English Summary: CM Siddaramaiah and ministers resign soon

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...