Oyorooms IN

Thursday, 17th August, 2017 5:13 PM

BREAKING NEWS

ಪ್ರಮುಖ ಸುದ್ದಿಗಳು

ವರುಣಾದಲ್ಲಿ ಮಗ, ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಗೆ ಸಿದ್ಧ..?

siddaramaiah

ಮೈಸೂರು: ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್ ಅಕಾಲಿಕ ನಿಧನದ ನಂತರ ಎರಡನೇ ಪುತ್ರ ಡಾ.ಯತೀಂದ್ರ ರಾಜಕೀಯ ಪ್ರವೇಶ ತೆರೆ ಎಳೆದಿದ್ದು, ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ತಮ್ಮ ಮಗನನ್ನು ಹರಸುವಂತೆ ವರುಣಾ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಡಾ.ಯತೀಂದ್ರ ಸ್ಪರ್ಧಿಸಲಿದ್ದಾರೆ ಅನ್ನುವ ಸುದ್ದಿ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ವರುಣಾ ಕ್ಷೇತ್ರದಿಂದ ಡಾ.ಯತೀಂದ್ರ ಹಾಗೂ ವರುಣಾ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದು,  ಚಾಮುಂಡೇಶ್ವರಿ ಕ್ಷೇತ್ರದತ್ತ ಹೆಚ್ಚು ಗಮನ ಹರಿಸಲು ಸಿಎಂ ನಿರ್ಧರಿಸಿದ್ದಾರಂತೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರೊಂದಿಗೆ ಕ್ಷೇತ್ರ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಚಾಮುಂಡೇಶ್ವರಿ ಮತ್ತು ವರುಣ ಎರಡೂ ಕ್ಷೇತ್ರಗಳಿಗೆ ಸಮಾನ ಪ್ರಾಮುಖ್ಯತೆ ನೀಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಒಕ್ಕಲಿಗರು, ದಲಿತರು, ಕುರುಬರು ಮತ್ತು ನಾಯಕರು ಹೆಚ್ಚಾಗಿರುವ ಕ್ಷೇತ್ರದ ಜನತೆಯ ವಿಶ್ವಾಸ ಗಳಿಸಲು ಜನತಾ ದರ್ಶನ ನಡೆಸಲು ಮುಂದಾಗಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ನ ಜಿ.ಟಿ.ದೇವೇಗೌಡ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನೆಲಕಚ್ಚಿದ್ದರಿಂದ, ಈಗಿನಿಂದಲೇ ಚಾಮುಂಡೇಶ್ವರಿ ಕ್ಷೇತ್ರದತ್ತ ಗಮನ ನೀಡಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಆಲೋಚನೆ ನಡೆಸಿದ್ದು, ತಮ್ಮ ರಾಜಕೀಯ ಜೀವನವನ್ನು ಕರುಣಿಸಿದ ಕ್ಷೇತ್ರಕ್ಕೆ ವಿಶೇಷ ಕೆಲಸಗಳನ್ನು ಹಮ್ಮಿಕೊಳ್ಳುವಂತೆ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

English summary:  CM Siddaramaiah, son yathindra both are compaction in 2018 election

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...