Oyorooms IN

Thursday, 17th August, 2017 5:06 PM

BREAKING NEWS

ಪ್ರಮುಖ ಸುದ್ದಿಗಳು

ಕಾಲೇಜು ವಿದ್ಯಾರ್ಥಿಗಳಿಗೆ ವೈ ಫೈ ಭಾಗ್ಯ

computer

ಬೆಳಗಾವಿ:  ರಾಜ್ಯದ ಎಲ್ಲಾ  ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಚಿತ ವೈಫೈ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ರಾಜ್ಯದ 135 ಕಾಲೇಜುಗಳಲ್ಲಿ  ವೈ-ಫೈ ಸೌಲಭ್ಯ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ನೀಡಿದ್ದಾರೆ.

ರಾಜ್ಯದಲ್ಲಿ 412 ಸರ್ಕಾರಿ ಪದವಿ ಕಾಲೇಜುಗಳ ಪೈಕಿ ಮೊದಲ ಹಂತದಲ್ಲಿ 135 ಕಾಲೇಜುಗಳಲ್ಲಿ ವೈ-ಫೈ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಸೌಲಭ್ಯವನ್ನು ಬಳಸಿಕೊಂಡು ಉತ್ತಮ ಜ್ಞಾನವನ್ನು ಪಡೆಯಲಿ ಎನ್ನುವ ಉದ್ದೇಶ ಸರ್ಕಾರ ಹೊಂದಿರುವುದಾಗಿ ತಿಳಿಸಿದ್ದಾರೆ.

ವೈ-ಫೈನೊಂದಿಗೆ ಹಿಂದುಳಿದ ವರ್ಗ, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲು ನಿರ್ಧರಿಸಲಾಗಿದ್ದು, ಈ ಯೋಜನೆ ಯಾವಾಗಿನಿಂದ ಜಾರಿಯಾಗಲಿದೆ ಎನ್ನುವುದರ ಬಗ್ಗೆ ಖಚಿತ ಮಾಹಿತಿಯನ್ನು ನೀಡಿಲ್ಲ

English summary:  degree student get free wifi

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...