Oyorooms IN

Tuesday, 23rd May, 2017 12:25 AM

BREAKING NEWS

ಪ್ರಮುಖ ಸುದ್ದಿಗಳು

ಬಿಜೆಪಿ ಸೇರಲಿದ್ದಾರಂತೆ ಮಂಡ್ಯದ ಗಂಡು ಅಂಬರೀಶ್, ಸುಮಲತಾ..?

ambrish-sumalatha

ಬೆಳಗಾವಿ: ಸಚಿವ ಸಂಪುಟದ ಸರ್ಜರಿಯಿಂದ ಸಚಿವ ಸ್ಥಾನ ಕಳೆದುಕೊಂಡ ರೆಬಲ್ ಸ್ಟಾರ್ ಅಂಬರೀಶ್, ಬಿಜೆಪಿ ಸೇರಲಿದ್ದಾರೆ ಎನ್ನುವ ಮಾಹಿತಿ ಹೊರಬಂದಿದ್ದು, ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಪ್ರಬಲಗೊಳಿಸುವತ್ತ ದೃಷ್ಟಿ ನೆಟ್ಟಿರುವ ಬಿಜೆಪಿ ಮುಖಂಡರು ಅಂಬರೀಶ್ ಅವರಿಗೆ ಮುಕ್ತ ಆಹ್ವಾನವನ್ನು ನೀಡಿದ್ದಾರೆ.

ಕೇಂದ್ರ ಸಚಿವರಾಗಿದ್ದ ಅಂಬರೀಶ್ ಅವರ ಅನುಭವ ಪಕ್ಷಕ್ಕೆ ಅವಶ್ಯಕವಾಗಿದ್ದು, ಅಂಬರೀಶ್ ಬಿಜೆಪಿಗೆ ಬರುವುದಾದರೆ ಮುಕ್ತವಾಗಿ ಸ್ವಾಗತಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ, ಸಚಿವ ಸಂಪುಟದಿಂದ ಕೈಬಿಡಬೇಕಾದರೆ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿಲ್ಲ ಎಂಬ ಬೇಸರವಿದ್ದು, ಬಿಜೆಪಿ ಮುಖಂಡರು ಈಗಾಗಲೇ ಅಂಬರೀಶ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

ambrish-sumalatha_

ಅಂಬರೀಶ್ ಅವರೊಂದಿಗೆ ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದು? ಯಶವಂತಪುರ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಸ್ಷರ್ಧಿಸಲಿದ್ದಾರೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ, ಮೈಸೂರು ಭಾಗದ ದಲಿತ ಮುಖಂಡ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಸೇರಲಿದ್ದು, ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡ ಅಂಬರೀಶ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ಆ ಭಾಗದಲ್ಲಿ ಪಕ್ಷದ ಬಲವರ್ಧನೆ ಮಾಡಿಕೊಳ್ಳುವತ್ತ ಮುಖಂಡರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಆದರೆ ಮಂಡ್ಯದ ಶಾಸಕರಾಗಿರುವ ಅಂಬರೀಶ್ ಅವರು ಸಕ್ರಿಯ ರಾಜಕಾರಣದಿಂದ ದೂರ ಸರಿಯುವ ಮಾತುಗಳನ್ನು ಆಡುತ್ತಿರುವುದರಿಂದ ಬಿಜೆಪಿ ಮುಖಂಡರು ಸುಮಲತಾ ಅಂಬರೀಶ್ ಅವರಿಗೆ  ಬೆಂಗಳೂರಿನ ಯಶವಂತಪುರದಿಂದ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಹೇಳಿದ್ದು, ಸುಮಲತಾ ಅವರನ್ನು ಮೇಲ್ಮನೆಗೆ ನೇಮಕ ಮಾಡುವ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗಿದೆ.

English summary :  ex minister, actor ambrish join bjp

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...