Oyorooms IN

Saturday, 21st January, 2017 7:30 AM

BREAKING NEWS

ರಾಜ್ಯ

ಭೀಕರ ರಸ್ತೆ ಅಪಘಾತ ಸ್ಥಳದಲ್ಲಿಯೇ ನಾಲ್ವರು ಸಾವು

ACCIDENT

ಹಾಸನ: ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ಹಾಸನದ ಹೊರವಲಯದಲ್ಲಿರುವ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಕಾರಿನ ಚಾಲಕ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಮೃತರು ಮಧ್ಯ ಪ್ರದೇಶ ಮೂಲದವರಾಗಿದ್ದು, ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಕಾರಿನ ಚಾಲಕ ಬೆಂಗಳೂರಿನ ಶಿವಮೂರ್ತಿ ಎಂದು ಪತ್ತೆಯಾಗಿದ್ದು, ಉಳಿದರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ,  ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಚಾಲಕ, ಅಪಘಾತದ ನಂತರ ಪರಾರಿಯಾಗಿದ್ದು, ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

English summary: Four people including a woman killed in accident on Hassan highway, another woman suffered injuries .

 

ರಾಜ್ಯ ಇನ್ನಷ್ಟು

ಪ್ರಮುಖ ಸುದ್ದಿಗಳು