Oyorooms IN

Thursday, 17th August, 2017 5:13 PM

BREAKING NEWS

ಪ್ರಮುಖ ಸುದ್ದಿಗಳು

ರಾಜಕೀಯ ಜಿದ್ದು: ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಕಗ್ಗೊಲೆ

ಮಂಡ್ಯ: ಕಾವೇರಿ ಹಾಗೂ ಕಬ್ಬಿಗೆ ಹೆಸರಾಗಿರುವ ಮಂಡ್ಯದಲ್ಲಿ ಈಗ ಕರ್ನಾಟಕದ ಬಿಹಾರ ಎನ್ನುವಂತಹ ಪರಿಸ್ಥಿತಿ ಉದ್ಭವವಾಗಿದೆ, ಗೂಂಡಾರಾಜ್ ಗೆ ಹೆಸರಾದ ಬಿಹಾರದಂತೆ, ಮಂಡ್ಯದಲ್ಲಿ ರಾಜಕೀಯ ವೈಷಮ್ಯದಿಂದ ಜೆಡಿಎಸ್ ಕಾರ್ಯಕರ್ತರ ಸರಣಿ ಕೊಲೆಗಳು ನಡೆಯುತ್ತಿವೆ.

ಕೇವಲ 9 ದಿನದ ಅಂತರದಲ್ಲಿ ಮಂಡ್ಯದಲ್ಲಿ ನಾಲ್ವರು ಜೆಡಿಎಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ, ನಿನ್ನೆ ತಡರಾತ್ರಿ ಕೆ.ಆರ್.ಪೇಟೆ ತಾಲ್ಲೂಕಿನ ಮುರುನಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತ ಹರೀಶ್ ಅಲಿಯಾಸ್  ಗುಂಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮಳವಳ್ಳಿ ಹಾಗೂ ಮದ್ದೂರಿನಲ್ಲಿಯೂ ಜೆಡಿಎಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದ್ದು, ಸರಣಿ ಕೊಲೆಗಳಿಂದ ಜೆಡಿಎಸ್ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದ್ದು, ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹತ್ಯೆಗಳು ನಡೆಯುತ್ತಿದ್ದರು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜೆಡಿಎಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

English summary: jds party workers serial murders in mandya

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...