Oyorooms IN

Wednesday, 29th March, 2017 10:50 AM

BREAKING NEWS

ತುಮಕೂರು

ಕಾಡಾನೆ ತುಳಿದು ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸೋರೆಕಾಯಿ ಪೇಟೆಯಲ್ಲಿ, ಕಾಡಾನೆ ತುಳಿದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಾಗರಾಜು(50) ಹಾಗೂ ಮೂಳಗಿರಿಯಯ್ಯ(55) ಮೃತಪಟ್ಟವರು. ಸೋರೆಕಾಯಿ ಪೇಟೆ ಸಮೀಪದ ಜಮೀನಿನಲ್ಲಿ ಕೆಲಸ ಮಾಡುವಾಗ ಆನೆ ದಾಳಿ ಮಾಡಿದ್ದು, ತುಳಿತಕ್ಕೆ ಒಳಗಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರು ಹಾಗೂ ಗುಬ್ಬಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎರಡು-ಮೂರು ವರ್ಷಗಳಿಂದ ಗುಬ್ಬಿ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಇದ್ದೇಇದೆ. ಶಾಶ್ವತ ಪರಿಹಾರ ಕಂಡುಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಜಮೀನುಗಳಿಗೆ ಕಾವಲು ಕಾಯಲು ಹೋಗುವಗ, ನೀರು ಹಾಯಿಸಬೇಕು ಎಂದು ತೆರಳುವಾಗ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು ಹೀಗೆ ಕೆಲಸ ಮೇಲೆ ತೆರಳುವ ಅಮಾಯಕ ರೈತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅವರ ಜೀವಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಜತೆಗೆ ಜನಪ್ರತಿನಿಧಿಗಳೂ ರೈತರ ಸಾವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ನಮ್ಮ ಸಹನೆಗೂ ಒಂದು ಮಿತಿ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...