Oyorooms IN

Friday, 23rd June, 2017 12:31 PM

BREAKING NEWS

ಕಲಬುರಗಿ

ರಾಜ್ಯೋತ್ಸವದಂದೇ ಪ್ರತ್ಯೇಕ ರಾಜ್ಯದ ಕೂಗು, ಪ್ರತಿಭಟನೆ

kalburgi-protest

ಕಲಬುರ್ಗಿ: ರಾಜ್ಯದೆಲ್ಲೆಡೆ ಅಖಂಡ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ನೆಲೆಸಿದ್ದರೆ, ಕಲಬುರ್ಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ  ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ  ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಕಲ್ಯಾಣ ಕರ್ನಾಟಕದ ಧ್ವಜಾರೋಹಣವನ್ನು ಮಾಡಲು ಮುಂದಾದಾಗ ಪೊಲೀಸರು ಕಾರ್ಯಕರ್ತರನ್ನು ತಡೆದು,  ಎಂಎಸ್ ಪಾಟೀಲ್ ನರಿಬೋಳ ಸೇರಿದಂತೆ 30ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿದರು.ಮುಂಜಾಗ್ರತಾ ಕ್ರಮವಾಗಿ ಈ ವೃತ್ತದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಹೈದರಾಬಾದ್-ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಇತಿಹಾಸವಿದ್ದು, ಈ ಭಾಗದ ಜಿಲ್ಲೆಗಳನ್ನು ಸರ್ಕಾರಗಳು ಕಡೆಗಣಿಸುತ್ತಿರುವುದರಿಂದ,  ಈ ಭಾಗದ ಜಿಲ್ಲೆಗಳು ತೀರಾ ಹಿಂದುಳಿಯುವಂತಾಗಿದ್ದು, ಕಲ್ಯಾಣ ಕರ್ನಾಟಕ ರಾಜ್ಯದ ಸ್ಥಾಪನೆಯಿಂದ ಈ ಭಾಗದ ಅಭಿವೃದ್ಧಿ ಸಾಧ್ಯ ಎಂಬುದು ಪ್ರತ್ಯೇಕತಾವಾದಿಗಳ ವಾದವಾಗಿದ್ದು. ಆಂಧ್ರಪ್ರದೇಶದಿಂದ ತೆಲಂಗಾಣವನ್ನು ವಿಭಜನೆ ಮಾಡಿರುವುದು ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟಕ್ಕೆ  ಇನ್ನಷ್ಟು ಬಲ ಸಿಕ್ಕಂತಾಗಿದೆ.

English summary:  kalayana Karnataka sparate state demand in kalburgi

ಕಲಬುರಗಿ ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...