Oyorooms IN

Wednesday, 24th May, 2017 7:49 AM

BREAKING NEWS

ಪ್ರಮುಖ ಸುದ್ದಿಗಳು

ಕನಕಪುರ: ಭೀಕರ ಅಪಘಾತ ಇಬ್ಬರ ಸಾವು, ನಾಲ್ವರಿಗೆ ಗಾಯ

accident_kankapura

ಕನಕಪುರ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದರಿಂದ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡಿರುವ ಘಟನೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಂಗಳೂರಿನ ಕೋಣನಕುಂಟೆ ಕ್ರಾಸ್ನ ಎಳಚೇನಹಳ್ಳಿ ಗ್ರಾಮದ ದಂಪತಿಗಳಾದ ಕುಮಾರ್(47), ಪತ್ನಿ ರುದ್ರಮ್ಮ(35) ಮೃತಪಟ್ಟಿದ್ದು, ಮಕ್ಕಳಾದ ಪೂರ್ಣಿಮಾ(14), ಕಿರಣ್(12) ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡಬ್ಲ್ಯುಎಸ್ಎಸ್ನಲ್ಲಿ ನೌಕರರಾಗಿರುವ ಕುಮಾರ್ ಕನಕಪುರ ತಾಲ್ಲೂಕಿನ ಕಬ್ಬಾಳಮ್ಮನ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ  ಅಪಘಾತ ಸಂಭವಿಸಿದೆ.

ಮುತ್ತತ್ತಿ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದ ಐವರು ಎಂಜನಿಯರಿಂಗ್ ವಿದ್ಯಾರ್ಥಿಯರಿದ್ದ ಕಾರು, ಕುಮಾರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಪಾನಮತ್ತರಾಗಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿಕೊಂಡು ಬಂದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು. ಗಾಯಾಳುಗಳಿಗೆ  ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

English summary: kanakapura road accident 2 dead, 4 injures

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...