Oyorooms IN

Friday, 26th May, 2017 4:13 AM

BREAKING NEWS

ಕೊಡಗು

ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣ ಕೊಡಗು ಬಂದ್; ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹ

ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣ ಕೊಡಗು ಬಂದ್; ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹ
ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣ ಕೊಡಗು ಬಂದ್; ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹ

ಮಡಿಕೇರಿ: ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒತ್ತಾಯಿಸಬೇಕು ಹಾಗೂ ಸಚಿವ ಕೆಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ನೀಡಿರುವ ಕೊಡಗು ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಂಗಡಿ, ಮುಂಗಟ್ಟುಗಳು ಬಂದ್ ಆಗಿದ್ದು, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ವಿರಾಜಪೇಟೆ ಬಳಿ ಪ್ರತಿಭಟನಾಕಾರರು ಮರವನ್ನು ಕಡಿದು ರಸ್ತೆ ಸಂಚಾರ ಬಂದ್ ಮಾಡಿರುವ ಘಟನೆ ನಡೆದಿದೆ.

ಬಂದ್ ನಿಂದಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಪರದಾಡುವಂತಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೊಡಗಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಡಿಕೇರಿಯ ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಕುಶಾಲನಗರದ ಕೊಪ್ಪ ಗೇಟ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಜಾರ್ಜ್ ಸೇರಿದಂತೆ ಮೂವರ ವಿರುದ್ಧವೂ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿ ಘೋಷಣೆ ಕೂಗಿದರು

ಕೊಡಗು ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...