Oyorooms IN

Thursday, 27th July, 2017 4:13 AM

BREAKING NEWS

ಉದ್ಯೋಗ

ಕೆಎಸ್ಆರ್‌ಪಿ 597 ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಅರ್ಜಿ ಸಲ್ಲಿಸಿ

ಕೆಎಸ್ಆರ್‌ಪಿ 597 ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು :  ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳಾ) ಕೆಎಸ್ಆರ್‌ಪಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ  : ಆಗಸ್ಟ್ 31, 2016
ಒಟ್ಟು ಹುದ್ದೆಗಳ ಸಂಖ್ಯೆ: ರಿಸರ್ವ ಪೊಲೀಸ್ ಕಾನ್ಸ್‌ಟೇಬಲ್ (ಕೆ.ಎಸ್.ಆರ್‌.ಪಿ) ಪುರುಷ 545 ಹುದ್ದೆಗಳು, ವಿಶೇಷ ರಿಸರ್ವ ಪೊಲೀಸ್ ಕಾನ್ಸ್‌ಟೇಬಲ್ (ಕೆ.ಎಸ್.ಆರ್‌.ಪಿ) ಮಹಿಳಾ 52 ಹುದ್ದೆಗಳು. ಒಟ್ಟು 597 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ವಯೋಮಿತಿ : ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 31/8/2016ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಪ.ಜಾ/ಪ.ಪಂ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ. ಇತರ ಅಭ್ಯರ್ಥಿಗಳಿಗೆ 25 ವರ್ಷಗಳು. ಕರ್ನಾಟಕ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು

ಅರ್ಜಿ ಶುಲ್ಕ : ಸಾಮಾನ್ಯ ವರ್ಗ/ಪ್ರವರ್ಗ 2 (ಎ), 2 (ಬಿ), 3(ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪ.ಜಾ/ಪ.ಪಂ/ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ನಿಗದಿತ ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಶಾಖೆಗಳಲ್ಲಿ ಚಲನ್ ನೀಡಿ ಪಾವತಿ ಮಾಡಿ.

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/8/2016 ಸಂಜೆ 6 ಗಂಟೆ

* ಅಧಿಕೃತ ಬ್ಯಾಂಕ್ ಶಾಖೆಗಳಲ್ಲಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 2/9/2016

* ಅರ್ಜಿ ಸಲ್ಲಿಸುವಾಗ ಗೊಂದಲಗಳು ಉಂಟಾದರೆ ಕರೆ ಮಾಡಲು ಸಹಾಯವಾಣಿ ಸಂಖ್ಯೆ 080-22943346.

ಉದ್ಯೋಗ ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...