Oyorooms IN

Sunday, 28th May, 2017 12:07 AM

BREAKING NEWS

ಪ್ರಮುಖ ಸುದ್ದಿಗಳು

ಭಾರತದ ಅಮೂಲ್ಯ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ

ga1111
ಜನನ:    ಅಕ್ಟೋಬರ್ 02, 1904
ಮರಣ:    ಜನವರಿ 11, 1966
ಜನಿಸಿದ ಸ್ಥಳ:    ಮೊಘಲ್‌ಸಾರಾಯ್, ಉತ್ತರ ಪ್ರದೇಶ
ಭಾರತದ ಪ್ರಧಾನ ಮಂತ್ರಿ
ರಾಜಕೀಯ ಪಕ್ಷ:    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
ಸೇವೆ ಪ್ರಾರಂಭಿಸಿದ್ದು:    ಜೂನ್ 9, 1964
ಇವರ ಸೇವೆ ಕೊನೆಗೊಂಡಿದ್ದು: ಜನವರಿ 11, 1966

ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್ 02, 1904 – ಜನವರಿ ೧೧, ೧೯೬೬) ಸ್ವತಂತ್ರ
ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ
ಹೋರಾಡಿದವರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ,ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ.ಇಂದು (ಅಕ್ಟೋಬರ್ 2) ಅವರ 112ನೇ ಜನ್ಮದಿನ.

ಲಾಲ್ ಬಹಾದುರ್ ಶಾಸ್ತ್ರಿ ಜೀವನ: 
ಲಾಲ್ ಬಹಾದುರ್ ಮೊಘಲ್‌ ಸಾರಾಯ್‌ನಲ್ಲಿ ಜನಿಸಿದ್ದು. 1921ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. 1926 ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತು.  ಒಟ್ಟು 9 ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು  ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ 1946 ರವರೆಗೂ ಜೈಲು ಶಿಕ್ಷೆ ಅನುಭವಿಸಿದರು.

ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ: ಸ್ವಾತಂತ್ರ ದೊರಕಿದ ಬಳಿಕ ಇವರು ಗೋವಿ೦ದ ವಲ್ಲಭ ಪ೦ತ್ ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. 1951ರಲ್ಲಿ ಇವರು ಲೋಕ ಸಭೆಗೆ ಜನರಲ್ ಸೆಕ್ರೆಟರಿ
ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು. ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ ರಾಜೀನಾಮೆ ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ 1961ರಲ್ಲಿ ಗೃಹ ಮಂತ್ರಿಯಾಗಿ. ಮೇ 27, 1964ರಂದು ಜವಾಹರ್‌ಲಾಲ್ ನೆಹರು ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು.
ಸ್ವಲ್ಪ ಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಆಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ 9 ರಂದು ಭಾರತದ ಪ್ರಧಾನಿಯಾದರು.

ಭಾರತದ ಅಮೂಲ್ಯ ರತ್ನ - ಲಾಲ್ ಬಹದ್ದೂರ್
ಭಾರತದ ಅಮೂಲ್ಯ ರತ್ನ – ಲಾಲ್ ಬಹದ್ದೂರ್

ಪ್ರಧಾನಿಯಾಗಿ ಲಾಲ್ ಬಹಾದುರ್ ಶಾಸ್ತ್ರಿ: ಆಗಿನ ಪ್ರಮುಖ ಸಮಸ್ಯೆ ಪಾಕಿಸ್ತಾನವಾಗಿತ್ತು. ಕಚ್ ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ ಭಾರತ-ಪಾಕ್ ಯುದ್ಧ ಪ್ರಾರಂಭವಾಗಿ ಭಾರತದ ಪಡೆ ಲಾಹೋರ್ ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿ ಕೊಳ್ಳಲಾಯಿತು. ಜನವರಿ 1966ರಲ್ಲಿ ಶಾಸ್ತ್ರಿ ಮತ್ತು ಮಹಮ್ಮದ್ ಆಯೂಬ್ ಖಾನ್ ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್ ಅವರಿಂದ ಆಯೋಜಿಸಲಾದ ಟಾಷ್ಕೆಂಟ್‌ನಲ್ಲಿ ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ 10 ರಂದು ಒಂದು ಒಪ್ಪಂದಕ್ಕೆ ಸಹಿ  ಹಾಕಿದರು. ಅದೇ ಟಾಶ್ಕೆಂಟ್ ಡಿಕ್ಲೆರೇಶನ್. ಆದರೆ ಪಾಕಿಸ್ತಾನದವರೇ ಅವರ ಊಟದಲ್ಲಿ ವಿಷವನ್ನು ಹಾಕಿ ಕೊಂದರು. ಇವರು ಕಾರ್ಯಕಾಲದಲ್ಲಿ ದೇಶದಾಚೆ ಸಾವನ್ನಪ್ಪಿದ ಏಕೈಕ ಭಾರತದ ಪ್ರಧಾನ ಮಂತ್ರಿ ಹಾಗು ಈ ತರಹದ ದುರಂತಕ್ಕೆ ತುತ್ತಾದ ಇತಿಹಾಸದ ಬಹುಶಃ ಕೆಲವೇ ಕೆಲವು ಸರಕಾರದ ಮುಖ್ಯಸ್ಥರಲ್ಲಿ ಒಬ್ಬರು.
ಪ್ರಾಮಾಣಿಕ, ಸ್ವಾಭಿಮಾನಿ: ಇವರು ಬಹುಶಃ ಭಾರತ ಕಂಡ ಅತ್ಯಂತ ಪ್ರಾಮಾಣಿಕ, ದಕ್ಷ ಪ್ರಧಾನಿಯಾಗಿದ್ದಾರೆ. ಇವರ ಪ್ರಾಮಾಣಿಕತೆಗೆ ಹಲವರು ತಲೆದೂಗಿದ್ದುಂಟು. ಹಾಗೆಯೇ ಇವರ ಸ್ವಾಭಿಮಾನ, ದೇಶಾಭಿಮಾನ ಕೂಡ ತಲೆದೂಗುವಂಹತದ್ದು.
ga111
ಶಾಸ್ತ್ರಿ ಸೋಮವಾರ: ಇವರು ಭಾರತವನ್ನು ಸ್ವಾಭಿಮಾನಿ ದೇಶವಾಗಿ ಮಾಡುವಲ್ಲಿ ಶ್ರಮವಹಿಸಿದ್ದಾರೆ. ಅವರು ಪ್ರಧಾನಿಯಾದ ಸಂದರ್ಭದಲ್ಲಿ ದೇಶದಲ್ಲಿ ಬರಗಾಲ ಬಂದೊದಗಿತು. ಆಗ ಹೊರ ದೇಶದಿಂದ ಆಹಾರವನ್ನು ಆಮದು ಮಾಡಿಕೊಳ್ಳಬೇಕಾಯಿತು. ಸಾಲ ಭಾರ ಅಧಿಕವಾಯಿತು.  ಅದನ್ನರಿತ ಶಾಸ್ತ್ರಿ ವಾರದಲ್ಲಿ ಒಂದು ದಿನ ಊಟವನ್ನು ಬಿಟ್ಟರೆ ಎಷ್ಟು ಆಹಾರ ಸಂಗ್ರಹ ವಾಗುವುದೆಂದು ಲೆಕ್ಕಾಚಾರ ಹಾಕಿ, ಸೋಮವಾರ ರಾತ್ರಿ ಊಟವನ್ನು ಬಿಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾವೂ ಸಹ ಸೋಮವಾರದ ಊಟವನ್ನು ತ್ಯಜಿಸಿದರು. ಇನ್ನೂ ಸಹ ಶಾಸ್ತ್ರಿಯವರ ಸೋಮವಾರವು ಪ್ರಚಲಿತದಲ್ಲಿದೆ. ಈ ನಿರ್ಣಯವು ಅವರ ಸ್ವಾಭಿಮಾನ ಯಾತ್ರೆಗೆ ಮುಕುಟ ಪ್ರಾಯದಂತಿದೆ.
ಪ್ರಶಸ್ತಿಗಳು: ಇವರಿಗೆ ಮರಣಾನಂತರ ಭಾರತ ರತ್ನವನ್ನು ಪ್ರಧಾನ ಮಾಡಲಾಯಿತು. ಇವರ ಸ್ಮರಣೆಗೆ ದೆಹಲಿಯಲ್ಲಿ ಸ್ಮಾರಕವೊಂದನ್ನು ನಿರ್ಮಿಸಲಾಗಿದೆ. ಇವರ ಜನಪ್ರಿಯ ವಾಕ್ಯ ಜೈ ಜವಾನ್,ಜೈ ಕಿಸಾನ್ ಇಂದಿಗೂ ಚಿರವಾಗಿ ಉಳಿದಿದೆ.
ಶಾಸ್ತ್ರಿಯವರು ಶಾರದ ಪ್ರಸಾದ್ ಹಾಗೂ ರಾಮ್ದುಲಾರಿ ದೇವಿ ದಂಪತಿಗಳ ಮಗನಾಗಿ 1904 ಅಕ್ಟೋಬರ್ 2ರಂದು  ಉತ್ತರ ಪ್ರದೇಶದ ರುದ್ರ ಪ್ರಯಾಗದಲ್ಲಿ ಜನಿಸಿದರು.ಗಾಂಧೀಜಿಯವರ ಅಸಹಕಾರ ಚಳುವಳಿ,ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಮೂಂಚೂಣಿಯಲ್ಲಿದ್ದರು.ಅವರ ಪತ್ನಿಯ ಹೆಸರು ಲಲಿತ ದೇವಿ.ಅದು ಕ್ವಿಟ್ ಇಂಡಿಯಾ ಚಳುವಳಿಯ ಸಂಧರ್ಭ, ಹೋರಾಟಕ್ಕೆ ಹೊರಟು ನಿಂತಿದ್ದ ಶಾಸ್ತ್ರಿಯವರಿಗೆ,ಲಲಿತ ದೇವಿಯವರು ‘ಜೈಲುಗಳೆಲ್ಲ ಈಗಾಗಲೇ ತುಂಬಿವೆ ಇನ್ನು ನೀವೆಲ್ಲಿಗೆ ಹೊರಟಿರಿ’ ಅಂದರು , ಅದಕ್ಕೆ ನಸು ನಕ್ಕ ಶಾಸ್ತ್ರಿಗಳು ಹೀಗೆ ಹೇಳಿದ್ದರು  ‘ನನ್ನ ಜಾಗ ಅಲ್ಲಿ ಮೊದಲೇ ಮೀಸಲಾಗಿಬಿಟ್ಟಿದೆ ಬಿಡು’.ಬಾಲ್ಯದಲ್ಲೇ ಲೋಕಮಾನ್ಯ ಬಾಲಗಂಗಾಧರ್ ತಿಲಕ್ ಮತ್ತು ಮಹಾತ್ಮರ ಪ್ರಭಾವಕ್ಕೊಳಗಾಗಿದ್ದ ಶಾಸ್ತ್ರಿಗಳು ತಮ್ಮ ನಿಷ್ಠೆ,ಸಜ್ಜನಿಕೆ ಹೆಸರುವಾಸಿಯಾದವರು.

ಈ ದೇಶದ ಜನ ಸಾಮಾನ್ಯರ ನಾಡಿ ಮಿಡಿತವನ್ನರಿತಿದ್ದ ಜನ ನಾಯಕ,ಸರಳತೆ-ಸಜ್ಜನಿಕೆಯ ಜನನಾಯಕನನ್ನ ದೇಶ ಕಳೆದುಕೊಂಡಿದ್ದಂತು ಕಟು ಸತ್ಯ!, ಅವರ ಕಣ್ಮರೆಯು ಭಾರತದ  ಪ್ರಜಾಪ್ರಭುತ್ವವನ್ನ ವಂಶಾಡಳಿತದ ತೆಕ್ಕೆಗೆ ಸಿಕ್ಕಿಸಿತ್ತು  ಗಾಂಧಿಜಿ ಹುಟ್ಟಿದ  ದಿನವೇ ಹುಟ್ಟಿ ಅವರು ಹೇಳುತಿದ್ದ ಆದರ್ಶಗಳನ್ನ ವಾಸ್ತವಕ್ಕೆ ತರುತಿದ್ದ ಶಾಸ್ತ್ರಿಗಳ
ಅಕಾಲಿಕ ಕಣ್ಮರೆ ದೇಶಕ್ಕೆ ದೊಡ್ಡ ನಷ್ಟ.ಅಂತಹ ಪುಣ್ಯಾತ್ಮನ  ಜನ್ಮದಿನವಿಂದು.ಭ್ರಷ್ಟಾಚಾರ,ವೋಟ್ ಬ್ಯಾಂಕ್ ರಾಜಕಾರಣದ ಈ ಕೆಟ್ಟ ಸಮಯದಲ್ಲಿ ಶಾಸ್ತ್ರಿಗಳನ್ತವರು ಮತ್ತೆ ಹುಟ್ಟಿ ಬರಲಿ ಎಂದು ಆಶಿಸುತ್ತ  ಶಾಸ್ತ್ರಿಗಳಿಗೊಂದು
ಸಲಾಂ ಹೇಳೋಣ ಬನ್ನಿ!

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...