Oyorooms IN

Monday, 26th June, 2017 4:06 PM

BREAKING NEWS

ಧಾರವಾಡ

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪೂಜಿತಾ ಹುಬ್ಬಳ್ಳಿಯಲ್ಲಿ ಸಿಕ್ಕಿದಳು

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪೂಜಿತಾ ಹುಬ್ಬಳ್ಳಿಯಲ್ಲಿ ಸಿಕ್ಕಿದಳು

ಹುಬ್ಬಳ್ಳಿ : ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಉತ್ತರ ಪತ್ರಿಕೆಗೆ ಪೋಷಕರಿಂದ ಸಹಿ ಹಾಕಿಸಿಕೊಂಡು ಬರುವಂತೆ ಶಿಕ್ಷಕರು ಹೇಳಿದ್ದರಿಂದ ಮನೆ ಬಿಟ್ಟು ನಾಪತ್ತೆಯಾಗಿದ್ದ, ಬಾಲಕಿ ಎಂ.ಕೆ ಪೂಜಿತಾ ಹುಬ್ಬಳ್ಳಿ ರೇಲ್ವೆ ನಿಲ್ದಾಣದಲ್ಲಿ ಸಿಕ್ಕಿದ್ದಾಳೆ.

ಮುಂಬೈಗೆ ರೈಲಿಯಲ್ಲಿ ಪ್ರಯಾಣಿಸುತ್ತಿದ್ದಾಳೆ ಎಂಬ ಶಂಕೆ ಮೇರೆಗೆ ಹುಬ್ಬಳ್ಳಿಯಲ್ಲಿದ್ದ ಪೂಜಿತಾ ಸಂಬಂಧಿಕರು ಬೆಳಗಿನಿಂದಲೇ ನಗರದ ರೇಲ್ವೆ ನಿಲ್ದಾಣಕ್ಕೆ ಬಂದು ಪೊಲೀಸರ ಸಹಾಯದೊಂದಿಗೆ ಪ್ರತಿಯೊಂದು ರೈಲುಗಳನ್ನು ಪರಿಶೀಲಿಸುತ್ತಿದ್ದಾಗ ರೈಲಿನಲ್ಲಿ ಪೂಜಿತಾ ಪತ್ತೆಯಾಗಿದ್ದಾಳೆ. ಸದ್ಯ ಆಕೆಯನ್ನು ತಮ್ಮ ವಶಕ್ಕೆ ಪಡೆದ ಪೊಲೀಸರು ಕೆಲ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಸಂಬಂಧಿಕರಿಗೆ ಒಪ್ಪಿಸಿದ್ದಾರೆ.

13 ವರ್ಷದ ಬಾಲಕಿ ಪೂಜಿತಾ ರಾಜಾಜಿನಗರದಲ್ಲಿರುವ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದಳು. ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಉತ್ತರ ಪತ್ರಿಕೆಗೆ ಪೋಷಕರಿಂದ ಸಹಿ ಹಾಕಿಸಿಕೊಂಡು ಬರುವಂತೆ ಶಿಕ್ಷಕರು ಹೇಳಿದ್ದರು. ಇದರಿಂದ ಗಾಬರಿಗೊಂಡ ಪೂಜಿತಾ ಮನೆ ಬಿಟ್ಟು ಹೋಗಿದ್ದಳು.

ಧಾರವಾಡ ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...