Oyorooms IN

Saturday, 24th June, 2017 7:28 AM

BREAKING NEWS

ಪ್ರಮುಖ ಸುದ್ದಿಗಳು

ರಾಜ್ಯದಲ್ಲಿ ಹೊಸದಾಗಿ 33 ತಾಲ್ಲೂಕುಗಳ ರಚನೆ


ಬೆಂಗಳೂರು:  ರಾಜ್ಯದಲ್ಲಿ ಹೊಸದಾಗಿ 33 ತಾಲ್ಲೂಕುಗಳನ್ನು ರಚನೆ ಮಾಡಲು ಉದ್ದೇಶಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ತಾಲ್ಲೂಕುಗಳ ರಚನೆ ವಿಚಾರ ನೆನೆಗುದ್ದಿಗೆ ಬಿದ್ದಿತ್ತು. ಮುಂದಿನ ಬಜೆಟ್‌ನಲ್ಲಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.

ಪ್ರತಿ ತಾಲ್ಲೂಕಿಗೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ರೂ. ವೆಚ್ಚವಾಗುತ್ತದೆ. ಸುಮಾರು 3300 ಕೋಟಿ ರೂ. ಸರ್ಕಾರದ ಮೇಲೆ ಹೊರಬೀಳಲಿದೆ. ಮೊದಲು ಮೂಲಸೌಕರ್ಯ ಕಲ್ಪಿಸಿದ ನಂತರ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲು ಉದ್ದೇಶಿಸಲಾಗಿದೆ ಎಂದರು.

ಕುಡಿಯುವ ನೀರಿಗೆ 350 ಕೋಟಿ ಹಣ ಬಿಡುಗೆಡ ಮಾಡಿದ್ದು ಎಷ್ಟೇ ಹಣ ಖರ್ಚಾದರೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬರ ಅಧ್ಯಯನಕ್ಕೆ ನಾಲ್ಕು ತಂಡಗಳು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು , ಇನ್ನು ಆ ತಂಡಗಳಿಂದ ವರದಿ ಬಂದಿಲ್ಲ. ನಾಳೆ ನಡೆಯುವ ಸಂಪುಟ ಉಪಸಮಿತಿ ಸಭೆಯಲ್ಲಿ , ಹಿಂಗಾರು ಮಳೆಯಿಂದಾಗುವ ನಷ್ಟ , ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...