Oyorooms IN

Saturday, 22nd July, 2017 4:26 PM

BREAKING NEWS

ಪ್ರಮುಖ ಸುದ್ದಿಗಳು

ಮಹದಾಯಿ, ಕಾವೇರಿ ಗಲಾಟೆ- ರೈತರ ಮೇಲಿನ ಪ್ರಕರಣ ವಾಪಸ್

ಬೆಳಗಾವಿ: ಮಹದಾಯಿ ಮತ್ತು ಕಾವೇರಿ ಗಲಾಟೆಯಲ್ಲಿ ರೈತರ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು ಅಮಾಯಕ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದಾಗಿ ಗೃಹ ಸಚಿವ ಪರಮೇಶ್ವರ್ ಪುನರುಚ್ಚರಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಕುಡಚಿ ಕ್ಷೇತ್ರದ ಶಾಸಕ ಪಿ.ರಾಜು ಅವರು ರೈತರ ಮೇಲೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಕೇಳಿದರು. ಮಹದಾಯಿ ನದಿ ನೀರಿನ ಚಳವಳಿಯಲ್ಲಿ ಒಟ್ಟು 82 ಪ್ರಕರಣಗಳು ದಾಖಲಾಗಿವೆ. ಹುಬ್ಬಳ್ಳಿ-ಧಾರವಾಡದಲ್ಲಿ 6, ಧಾರವಾಡದಲ್ಲಿ 51, ಬೆಳಗಾವಿಯಲ್ಲಿ 5, ದಾವಣಗೆರೆಯಲ್ಲಿ 6, ಗದಗದಲ್ಲಿ 13, ಬಾಗಲಕೋಟೆಯಲ್ಲಿ ಒಂದು ಪ್ರಕರಣ. ಕಾವೇರಿ ನದಿ ನೀರಿನ ಚಳವಳಿಯಲ್ಲಿ 44 ಪ್ರಕರಣಗಳು ದಾಖಲಾಗಿದ್ದು, ರಾಮನಗರ, ಕೋಲಾರ, ಚಾಮರಾಜನಗರದಲ್ಲಿ ತಲಾ ಒಂದೊಂದು, ಮೈಸೂರಿನಲ್ಲಿ 2, ಮಂಡ್ಯ ಜಿಲ್ಲೆಯಲ್ಲಿ 39 ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ಅಮಾಯಕರ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಈಗಾಗಲೇ ಪ್ರಕ್ರಿಯೆಯನ್ನು ಆರಂಭಿಸಿದೆ. ಬಾಗಲಕೋಟೆಯ ಒಂದು ಪ್ರಕರಣ ಹೊರತು ಪಡಿಸಿ ಉಳಿದ ಎಲ್ಲಾ ಪ್ರಕರಣಗಳಲ್ಲೂ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.ಯಾವ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ವರದಿ ನೀಡಲು ಹಿರಿಯ ಅಧಿಕಾರಿಗಳಾದ ಕಮಲ್ ಪಂಥ್ ಮತ್ತು ರಾಘವೇಂದ್ರ ಔರಾದ್ಕರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ಪಡೆಯಲಾಗಿದೆ.

parameshwar

ಸಮಿತಿ  ನೀಡಿರುವ ವರದಿಯನ್ನು  ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿನಂತರ ಸಂಪುಟದ ಮುಂದೆ ಮಂಡಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು  ಗೃಹ ಸಚಿವ ಪರಮೇಶ್ವರ್ ಹೇಳಿದ್ದು,. ಶಾಂತಿಯುತ ಚಳವಳಿಗೆ ಸರ್ಕಾರ ನಿರ್ಬಂಧ ವಿಧಿಸಿರಲಿಲ್ಲ. ಆದರೆ ಚಳವಳಿ ಹೆಸರಿನಲ್ಲಿ 12 ಕಚೇರಿಗಳನ್ನು ಸುಟ್ಟು ಹಾಕಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇಂತಹ ಅಹಿತಕರ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಇದನ್ನು ಮಾಡಿದವರು ರೈತರಲ್ಲ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದರು.

ಹಿರಿಯ ಪೊಲೀಸ್ ಅಧಿಕಾರಿಗಳ ಸಮಿತಿ ನೀಡಿರುವ ವರದಿಯನ್ನು ಈ ಅಧಿವೇಶನದಲ್ಲಿ ಮಂಡಿಸಿ. ನಿಮಗೆ ರಾಜಕೀಯ ಇಚ್ಚಾಶಕ್ತಿ ಇದ್ದರೆ ಕೂಡಲೇ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ಆಗ್ರಹಿಸಿದರು. ರೈತರ ಕಾಳಜಿಯ ಬಗ್ಗೆ ನಾವು ಯಾರಿಂದಲೂ ಪಾಠ ಕಲಿಯಬೇಕಿಲ್ಲ. ಅದಕ್ಕೆ ಮೂರುವರೆ ವರ್ಷದಲ್ಲಿ ಸಿದ್ದರಾಮಯ್ಯ ಅವರು ತೆಗೆದುಕೊಂಡ ರೈತಪರ ನಿರ್ಧಾರಗಳೇ ಉದಾಹರಣೆ. ಪ್ರಕರಣಗಳನ್ನು ಹಿಂಪಡೆಯಲು ತುರ್ತುಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಡೈರೆಕ್ಟರ್ ಆಫ್ ಪ್ರಾಸ್ಯೂಕ್ಯೂಷನ್ ವರದಿ ಬಂದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಪರಮೇಶ್ವರ್ ಹೇಳಿದರು.

English summary:  police case take back in mahadayi and kauvery   issue

ಪ್ರಮುಖ ಸುದ್ದಿಗಳು ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...