Oyorooms IN

Wednesday, 22nd February, 2017 1:07 AM

BREAKING NEWS

ಜಿಲ್ಲಾ ಸುದ್ದಿಗಳು

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಜನಸ್ಪಂದನಾ ಸಭೆ ನೂರಾರು ಸಮಸ್ಯೆ ನೂರೆಂಟು ಅರ್ಜಿ

ಜಿಲ್ಲಾ ಉಸ್ತುವಾರಿ ಸಚಿವ  ಪ್ರಿಯಾಂಕ್ ಖರ್ಗೆ ಅವರಿಂದ ಜನಸ್ಪಂದನಾ ಸಭೆ ನೂರಾರು ಸಮಸ್ಯೆ ನೂರೆಂಟು ಅರ್ಜಿ
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಜನಸ್ಪಂದನಾ ಸಭೆ 

ಯಾದಗಿರಿ:  ನೂರೆಂಟು ಸಮಸ್ಯೆ ! ನೂರೆಂಟು ಅರ್ಜಿ !! ಹೌದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ನಡೆಸಿದ ‘ಜನಸ್ಪಂದನಾ’ ಸಭೆಯಲ್ಲಿ ಸಮಸ್ಯೆಗಳ ಸರಮಾಲೆಯೇ ಕಂಡುಬಂತು.

ಜಿಲ್ಲೆಯ ವಿವಿದೆಡೆಯಿಂದ ಸಾರ್ವಜನಿಕರು ಅಹವಾಲು ಹೊತ್ತು ತಂದಿದ್ದರು. ಉದ್ಯೋಗ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಚಿವರ ಗಮನ ಸೆಳೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಅಂಗನವಾಡಿ ಸಹಾಯಕಿಯರ ಹುದ್ದೆಯ ನೇಮಕಾತಿಯಲ್ಲಿ ಮೀಸಲು ಪಾಲನೆ ಮಾಡಿಲ್ಲ ಎಂಬ ದೂರು ಬಂತು. ಪರಿಶಿಷ್ಟ ಪಂಗಡದ ಮಹಿಳಾ ವಿಧವೆಗೆ ಮೀಸಲಿದ್ದ ಹುದ್ದೆಯನ್ನು ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ನೀಡಲಾಗಿದೆ ಎಂದು ಉದ್ಯೋಗ ವಂಚಿತ ಮಹಿಳೆ ದೂರಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸರಿಪಡಿಸುವಂತೆ ಸಚಿವರು ಸೂಚಿಸಿದರು.

ಗುರುಮಿಟಕಲ್‍ನಲ್ಲಿ ನರೇಗಾದಲ್ಲಿ ಒಂದೇ ಕಾಮಗಾರಿಯನ್ನು 2 ಸ್ಕೀಮ್‍ನಲ್ಲಿ ಕೈಗೊಳ್ಳಲಾಗಿದೆ ಎಂಬ ದೂರು ಬಂದಿದ್ದು , ನಾಳೆಯೇ ಹೋಗಿ ಪರಿಶೀಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿ, ಒಂದು ವಾರದಲ್ಲಿ ಈ ಬಗ್ಗೆ ವರದಿ ನೀಡುವಂತೆ ತಾಕೀತು ಮಾಡಿದರು.

ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಬ್ಬಂದಿ ಇಲ್ಲ. ಇದರಿಂದ ಜನತೆಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಅಳಲು ತೋಡಿ ಕೊಂಡರು. ಇದಕ್ಕೆ ಸ್ಪಂದಿಸಿದ ಸಚಿವರು ಎನ್.ಆರ್.ಎಚ್.ಎಂ. ಮಾದರಿಯಂತೆ ಸಂಬಳ ನೀಡಲಾಗುತ್ತಿದೆ. ಆದರೂ, ಜಿಲ್ಲೆಗೆ ವೈದ್ಯರು ಬರಲು ಹಿಂದೇಟು ಹಾಕುತ್ತಿದ್ದಾರೆ. ಆದಷ್ಟು ಶೀಘ್ರವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಶಹಾಪುರದ ಮಾಲಗಿದ್ದ ಬುದ್ಧ, ಗುಂಡಹಳ್ಳಿ ಕೆರೆ, ಯಾದಗಿರಿ ಬೆಟ್ಟ ಇನ್ನಿತರವುಗಳನ್ನು ಪ್ರವಾಸಿ ತಾಣಗಳನ್ನಾಗಿ ಮಾಡುವಂತೆ ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಮನವಿ ಮಾಡಿದ್ದು, ಪ್ರವಾಸೋದ್ಯಮ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರು ಪ್ರವಾಸಿ ತಾಣವಾಗಿಸುವ ಬಗ್ಗೆ ಭರವಸೆ ನೀಡಿದರು. ಇನ್ನು, ಸುರಪುರದ ಯಾಳಗಿಯ ಪೋಷಕರೊಬ್ಬರು, ನನ್ನ ಮಗ ಅಂಗವಿಕಲನಾಗಿದ್ದು, ತ್ರಿಚಕ್ರ ವಾಹನ ನೀಡಬೇಕೆಂದು ಮನವಿ ಮಾಡಿದರೂ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗೋಳು ತೋಡಿಕೊಂಡರು. ತ್ರಿಚಕ್ರ ವಾಹನ ವಿತರಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮಾರುತಿ ಹುಜರತಿಗೆ ಸಚಿವರು ಸೂಚಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸರೆಡ್ಡಿ ಅನಪೂರ, ಜಿ.ಪಂ. ಉಪಾಧ್ಯಕ್ಷೆ ಚಂದ್ರಕಲಾ ಹೊಸಮನಿ, ಗುರುಮಟಕಲ್ ಶಾಸಕ ಬಾಬುರಾವ ಚಿಂಚನಸೂರ, ಸುರಪುರ ಶಾಸಕ ರಾಜ್‍ವೆಂಕಪ್ಪ ನಾಯಕ, ಶಹಾಪೂರ ಶಾಸಕ ಗುರುಪಾಟೀಲ, ಜಿಲ್ಲಾಧಿಕಾರಿ ಮನೋಜ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವಿಕಾಸ ಕಿಶೋರ ಸುರಳಕರ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಉಪಸ್ಥಿತರಿದ್ದರು.

ಜಿಲ್ಲಾ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...


ಬಿಜೆಪಿಗೆ ತಾಕತ್ ಇಲ್ಲ: ಡಾ.ಜಿ.ಪರಮೇಶ್ವರ್

ಕಲಬುರಗಿ :  ಮುಂಬರುವ ಚುನಾವಣೆಯನ್ನು...