Oyorooms IN

Friday, 24th February, 2017 6:48 AM

BREAKING NEWS

ಪ್ರಮುಖ ಸುದ್ದಿಗಳು

ಬ್ರಿಗೇಡ್ ತಿಕ್ಕಾಟ: ಈಶ್ವರಪ್ಪ ಉಚ್ಛಾಟನೆಗೆ ಬಿಎಸ್ ವೈ ಸ್ಕೆಚ್ ?

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಿ ಬಿಎಸ್ ಯಡಿಯೂರಪ್ಪ ನಾಯಕತ್ವಕ್ಕೆ ಸೆಡ್ಡು ಹೊಡೆದಿದ್ದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಗುರುತಿಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರನ್ನು ಉಚ್ಛಾಟಿಸುವ ಮೂಲಕ ರಾಯಣ್ಣ ಬ್ರಿಗೇಡ್ ಮುಖಂಡರಿಗೆ ಶಾಕ್ ನೀಡಿದ್ದಾರೆ ಬಿಎಸ್ ವೈ.

ಮಾಜಿ ಮೇಯರ್ ವೆಂಕಟೇಶಮೂರ್ತಿ ಅಮಾನತು ನಿರ್ಧಾರ ಈಶ್ವರಪ್ಪ ಅವರೊಂದಿಗೆ ಗುರುತಿಸಿಕೊಂಡಿರುವ ಮುಖಂಡರು ಹಾಗೂ ಕೆ.ಎಸ್.ಈಶ್ವರಪ್ಪ ಅವರನ್ನು ಉಚ್ಛಾಟನೆ ಮಾಡಲು ಬಿಎಸ್ ವೈ ನಿರ್ಧಾರ ಮಾಡಿದ್ದಾರೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ. ಇವರೊಂದಿಗೆ ಗುರುತಿಸಿಕೊಂಡಿರುವ ಪ್ರಮುಖರಾದ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವು ಸಚಿವ ಮೇಲೆಯೂ ಉಚ್ಛಾಟನೆಯ ತೂಗುಗತ್ತಿ ಇದೆ? ಎನ್ನುವ ಮಾತುಗಳು ಕೇಳಿಬಂದಿವೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ವೈ ನೇಮಕವಾದ ಮೇಲೆ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿದ್ದ ಕೆ.ಎಸ್.ಈಶ್ವರಪ್ಪ ಅವರಿಗೆ ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರು ಹಲವು ಬಾರಿ ಸಮಾಧಾನ ಮಾಡಿದ್ದರು, ಬ್ರಿಗೇಡ್ ಸ್ಥಾಪನೆಯಿಂದ ಕೆ.ಎಸ್.ಈಶ್ವರಪ್ಪ ಹಿಂದೆ ಸರಿಯಲಿಲ್ಲ.

ರಾಯಣ್ಣ ಬ್ರಿಗೇಡ್ ಸ್ಥಾಪನೆಯಿಂದ ಬಿಎಸ್ ವೈ ಅವರನ್ನು ಸಿಎಂ ಮಾಡುವುದೇ ನಮ್ಮ ಉದ್ದೇಶ ಎಂದು ಹೇಳಿಕೊಂಡು ಬಂದಿದ್ದ ಕೆ.ಎಸ್.ಈಶ್ವರಪ್ಪ ಈಗ ಬ್ರಿಗೇಡ್ ಸ್ಥಾಪನೆಯ ಉದ್ದೇಶ ಯಡಿಯೂರಪ್ಪ ಅವರನ್ನು ಸಿಎಂ ಮಾಡುವುದಲ್ಲ ಎಂದಿದ್ದು, ರಾಯಣ್ಣ ಬ್ರಿಗೇಡ್ ಸ್ಥಾಪನೆ ಆರಂಭದಿಂದಲೂ ಬಿಎಸ್ ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ನಡುವಿನ ಜಗಳಕ್ಕೆ ಕಾರಣವಾಗಿದ್ದ ಬ್ರಿಗೇಡ್ ಮುಖಂಡರ ಉಚ್ಛಾಟನೆಯಿಂದ ಬಿಜೆಪಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

English summary: Rayanna brigade  issue bsy ready to suspend KS Eshwarappa

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಸ್ಟಾರ್ ಹೀರೋ ಹಲ್ಲೆ ನಡೆಸಿದ ಎಂದ ನಟಿಮಣಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್...


ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...