Oyorooms IN

Friday, 24th February, 2017 11:21 AM

BREAKING NEWS

ಪ್ರಮುಖ ಸುದ್ದಿಗಳು

ಬಿಎಸ್ ವೈ ನಾಯಕತ್ವಕ್ಕೆ ಸೆಡ್ಡು ಹೊಡೆದ ಈಶ್ವರಪ್ಪ: ಬ್ರಿಗೇಡ್ ಚಾಲನೆ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪದಾಧಿಕಾರಗಳನ್ನು ನೇಮಿಸಿದ ನಂತರ ಉಂಟಾಗಿದ್ದ ಭಿನ್ನಮತ ಈಗ ಬ್ರಿಗೇಡ್ ಅಂತವನ್ನು ತಲುಪಿದೆ, ಬಿಎಸ್ ವೈ ವಿರೋಧದ ನಡುವೆಯೇ,  ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಚಾಲನೆ ನೀಡಿದ್ದು,  ಬಿಜೆಪಿ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಳ್ಳಲಿದೆ.

ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಬೃಹತ ಸಮಾವೇಶ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಬ್ರಿಗೇಡ್ನ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸೇರಿದಂತೆ ಸುಮಾರು 3 ಸಾವಿರ ಮಂದಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.

ಪದಾಧಿಕಾರಿಗಳ ನೇಮಕದಿಂದ ಶಿವಮೊಗ್ಗ, ತುಮಕೂರು ಸೇರಿದಂತೆ 10 ಜಿಲ್ಲೆಗಳ ಮಾಜಿ ಸಚಿವರು, ಬಿಜೆಪಿ ಮುಖಂಡರು ರಾಯಣ್ಣ ಬ್ರಿಗೇಡ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ಈ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಕೆ. ಎಸ್ ಈಶ್ವರಪ್ಪ. ಕಾಗಿನೆಲೆ ಪೀಠದ ನಿರಂಜನಾನಂದ ಸ್ವಾಮೀಜಿ, ಉಪ್ಪಾರ ಸಮಾಜದ ಪುರುಷೋತ್ತಮಾನಂದ ಸ್ವಾಮೀಜಿ ಹಾಗೂ ರಾಯಣ್ಣ ಬ್ರಿಗೇಡ್ ಅಧ್ಯಕ್ಷ ಕೆ ವಿರುಪಾಕ್ಷಪ್ಪ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಬಿಜೆಪಿಯನ್ನು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವುದು ನಮ್ಮ ಗುರಿ, ಬ್ರಿಗೇಡ್ ನಿಂದ ಬಿಜೆಪಿಗೆ ಯಾವುದೇ ಹಾನಿಯಾಗುವುದಿಲ್ಲ.ದಲಿತರು, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಬೇಕಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದರು. 1831ರ ಜನವರಿ 26ರಂದು ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟಿಷರು ನಂದಗಡದ ಮರಕ್ಕೆ ನೇಣು ಹಾಕಿದ್ದರು. ಈ ಹಿನ್ನೆಲೆಯಲ್ಲಿ ರಾಯಣ್ಣ ಬ್ರಿಗೇಡ್ ಕಾರ್ಯಕ್ರಮವನ್ನು ಇಲ್ಲೇ ಹಮ್ಮಿಕೊಳ್ಳಲಾಗಿತ್ತು.

ಬಿಎಸ್ ವೈ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿರುವ ನಾಯಕರು ಈಗ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಗುರುತಿಸಿಕೊಂಡಿದ್ದು, ಪಕ್ಷದಲ್ಲಿ ಈಗ ಇರುವ ಭಿನ್ನಮತ ಇನ್ನಷ್ಟು ಜಾಸ್ತಿಯಾಗಲು ರಾಯಣ್ಣ ಬ್ರಿಗೇಡ್ ಕಾರಣವಾಗಲಿದೆ ಎನ್ನುವ ಮಾತುಗಳು ಕೇಳಿಬಂದಿವೆ.

English summary: rayanna brigade more problem for bjp

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಸ್ಟಾರ್ ಹೀರೋ ಹಲ್ಲೆ ನಡೆಸಿದ ಎಂದ ನಟಿಮಣಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್...


ಕಾಂಗ್ರೆಸ್, ಬಿಜೆಪಿ ಕಪ್ಪ ಕಾಣಿಕೆ ನೀಡುವುದು ಹೊಸದೇನಲ್ಲ

ತುಮಕೂರು: ಕಾಂಗ್ರೆಸ್,ಬಿಜಿಪಿ ಪಕ್ಷಗಳು ಹೈಕಮಾಂಡ್‌ಗೆ ಕಪ್ಪಾ...


ಅಶ್ಲೀಲ ಚಿತ್ರ ನೋಡುವ ಗಂಡನನ್ನು ಕಾಪಾಡಿ

ಮುಂಬೈ:  ಮಧ್ಯರಾತ್ರಿಯಲ್ಲೂ ಎದ್ದು ಕೂತು...