Oyorooms IN

Thursday, 29th June, 2017 4:11 PM

BREAKING NEWS

ಚಿಕ್ಕಮಗಳೂರು

ಸಚಿವ ಎಚ್ ಎಸ್ ಮಹದೇವ್ ಪ್ರಸಾದ್ ನಿಧನ

ಕೊಪ್ಪ :ಇಲ್ಲಿನ ಖಾಸಗಿ ರೆಸಾರ್ಟ್ ನಲ್ಲಿ ತಂಗಿದ್ದ ಸಕ್ಕರೆ ಹಾಗೂ ಸಹಕಾರಿ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು ಹೃದಯಾಘಾತದಿಂದ ಮಂಗಳವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.
ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಿಕ್ಕಮಗಳೂರು ಜಿಲ್ಲೆಗೆ ಸೋಮವಾರ ಆಗಮಿಸಿದ್ದ ಎಚ್ ಎಸ್ ಮಹದೇವ್ ಪ್ರಸಾದ್(58) ಖಾಸಗಿ ಹೊಟೆಲ್ ನಲ್ಲಿ ತಂಗಿದ್ದರು. ಆದರೆ ರಾತ್ರಿ ಸುಮಾರು 2 ಗಂಟೆ ಹೊತ್ತಿನಲ್ಲಿ ಹೊಟೆಲ್ ಸಿಬ್ಬಂದಿ ಅವರ ಕೊಠಡಿಗೆ ತೆರಳಿ ಬಾಗಿಲು ತಟ್ಟಿದಾಗ ಅವರು ಬಾಗಿಲು ತೆರೆಯಲಿಲ್ಲ. ಬೆಳಗ್ಗೆ ಮತ್ತೆ ಬಾಗಿಲು ಬಡಿದಾಗ ಮತ್ತೆ ಅವರು ಬಾಗಿಲು ತೆಗೆಯದ ಕಾರಣ ಅನುಮಾನಗೊಂಡ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಮಹದೇವ ಪ್ರಸಾದ್ ಅವರು ತಂಗಿದ್ದ ಕೊಠಡಿಯ ಬಾಗಿಲನ್ನು ತೆರೆಯಲಾಗಿದ್ದು, ಮಹದೇವ ಪ್ರಸಾದ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.ಬೆಳಗ್ಗೆ 5 ರಿಂದ 6 ಗಂಟೆಯ ವೇಳೆ ಹೃದಯಾಘಾತ ಸಂಭವಿಸಿರುವ ಸಾಧ್ಯತೆಗಳಿದ್ದು, ಬೆಳಗ್ಗೆ ಆಪ್ತರೊಬ್ಬರು ಬಾಗಿಲು ತಟ್ಟಿದಾಗ ಬಾಗಿಲನ್ನು ತೆಗೆದಿಲ್ಲ ಎಂದು ವರದಿಯಾಗಿದೆ. ಕೂಡಲೆ ಬಾಗಿಲು ಒಡೆದು ಒಳ ಪ್ರವೇಶಿಸಿ ನೋಡಿದಾಗ ಹಾಸಿಗೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಮಹದೇವ್ ಪ್ರಸಾದ್ ಅವರು ಇಹಲೋಕ ತ್ಯಜಿಸಿದ್ದರು.

ವಿಷಯ ತಿಳಿಯುತ್ತಿದ್ದಂತೆ ಕೆಲ ಕಾರ್ಯಕರ್ತರು ರೆಸಾರ್ಟ್ನಲ್ಲಿ ಜಮಾವಣೆಗೊಂಡಿದ್ದಾರೆ. ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ದೌಡಾಯಿಸಿದ್ದಾರೆ.

ಚಿಕ್ಕಮಗಳೂರು ಇನ್ನಷ್ಟು

TOP STORY



ಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...