Oyorooms IN

Wednesday, 29th March, 2017 8:54 PM

BREAKING NEWS

ಪ್ರಮುಖ ಸುದ್ದಿಗಳು

ರಾಹುಲ್ ಗಾಂಧಿ ಮನೆಯಲ್ಲಿ ಭೂಕಂಪವಾಗಲಿದೆ; ಯಡಿಯೂರಪ್ಪ ಭವಿಷ್ಯ

ಮೈಸೂರು: ಸಂಸತ್ ನಲ್ಲಿ ಭೂಕಂಪವಾಗುತ್ತೇ ಎಂದಿದ್ದ  ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮನೆಯಲ್ಲಿಯೇ ಭೂಕಂಪವಾಗಲಿದ್ದು, ಅದು ಯಾವ ರೀತಿಯ ಭೂಕಂಪ ಎನ್ನುವುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ನಾನೇನು ಶಾಸ್ತ್ರ ಹೇಳುತ್ತಿಲ್ಲ, ಸತ್ಯ ಹೇಳುತ್ತಿದ್ದೇನೆ ಇನ್ನೆರಡು ದಿನಗಳಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ ಸಚಿವರ ಬಣ್ಣ ಬಯಲಾಗಲಿದೆ ಎಂದು ಭವಿಷ್ಯ ನುಡಿದಿರುವ ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ಕುತ್ತಿಗೆಗೆ ಪ್ರಕರಣ ತಗುಲಿ ಹಾಕಿಕೊಳ್ಳಲಿದ್ದು ಎಲ್ಲವೂ ಬಯಲಾಗಲಿದೆ ಎಂದು ಹೇಳಿದ್ದಾರೆ.

ನಂಜನಗೂಡು ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸುವುದು ಖಚಿತ, ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಲಿದ್ದಾರೆ, ಆದರೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಯಾಕೆ ಎಂದು ನಾನು ಹೇಳೋದಿಲ್ಲ, ಎಲ್ಲದಕ್ಕೂ ಉತ್ತರ ಸಿಗಲಿದೆ, ನಾನೇನು ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಹೇಳುವುದಿಲ್ಲ ಮುಂದೆ ನಿಮಗೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

English summary: soon earthquake in rahul gandi home   bjp sate chief bsy

ಪ್ರಮುಖ ಸುದ್ದಿಗಳು ಇನ್ನಷ್ಟು

ಪ್ರಮುಖ ಸುದ್ದಿಗಳು

ಚಪ್ಪಲಿ ಏಟು: ದೆಹಲಿಗೆ ಕಾರಿನಲ್ಲಿ ಹೊರಟ ಗಾಯಕ್ವಾಡ್

ಉಸ್ಮಾನಬಾದ್: ಏರ್ ಇಂಡಿಯಾ ಅಧಿಕಾರಿಯನ್ನು...


ತಮ್ಮನಿಗಾಗಿ ಯಾರು ಮಾಡದ ತ್ಯಾಗ ಮಾಡಿದ ಅಕ್ಕ..!

ಆಸ್ಟ್ರೇಲಿಯಾ:ಅಕ್ಕ-ತಮ್ಮನ ಸಂಬಂಧಕ್ಕಿಂತ ಪವಿತ್ರವಾದ ಸಂಬಂಧ...


ಇನ್ನೊಂದು ಈಶಾನ್ಯ ರಾಜ್ಯದ ಮೇಲೆ ಬಿಜೆಪಿ ಕಣ್ಣು !

ನವದೆಹಲಿ: ಈಗಾಗಲೇ ಈಶಾನ್ಯ ರಾಜ್ಯಗಳಾದ...