Oyorooms IN

Tuesday, 28th March, 2017 7:29 PM

BREAKING NEWS

ಮಂಡ್ಯ

ನನ್ನ ಸಾವಿಗೆ  ಮದುವೆಯಾಗಬೇಕಿದ್ದ ಯುವತಿ ಕಾರಣ

127

ಮಂಡ್ಯ: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಯುವಕನಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಮದುವೆಯಾಗಬೇಕಿತ್ತು.
ಆದರೆ, ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೇ ಯುವಕನ ಸಾವಿಗೆ ಕಾರಣವಾಗಿದ್ದಾಳೆ. ತನ್ನ ಸ್ನೇಹಿತೆ ಹಾಗೂ ಆಕೆಯ ಪ್ರಿಯಕರನೊಂದಿಗೆ ಸೇರಿ ಯುವಕನಿಗೆ ಮಾನಸಿಕ ಕಿರುಕುಳ ನೀಡಿದ್ದು, ಇದರಿಂದ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮರಳಗ ಗ್ರಾಮದ ಯುವಕ ತನ್ನ ಸಾವಿಗೆ ನಿಶ್ಚಿತಾರ್ಥ ಮಾಡಿಕೊಂಡ ಯುವತಿ ಹಾಗೂ ಆಕೆಯ ಸ್ನೇಹಿತೆ, ಮತ್ತು ಪ್ರಿಯಕರ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ಆಡಿಯೋ ರೆಕಾರ್ಡ್ ಮಾಡಿದ್ದಾನೆ.
೩ ದಿನಗಳ ಹಿಂದೆ ವಿಷ ಸೇವಿಸಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ. ಬೆಸಗರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಆಡಿಯೋದಲ್ಲಿ ಯುವತಿ ಮತ್ತು ಆಕೆಯ ಸ್ನೇಹಿತೆ, ಸ್ನೇಹಿತೆಯ ಪ್ರಿಯಕರ ಕಿರುಕುಳ ನೀಡಿದ್ದನ್ನು ಹೇಳಿಕೊಂಡಿದ್ದು, ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಮಂಡ್ಯ ಇನ್ನಷ್ಟು

ಪ್ರಮುಖ ಸುದ್ದಿಗಳು


ಗುಂಡಿನ ಚಕಮಕಿ: ನಾಲ್ವರ ಸಾವು

ಶ್ರೀನಗರ:  ಕಣಿವೆ ರಾಜ್ಯ ಕಾಶ್ಮೀರದಲ್ಲಿ...